ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನುಷ್ಯನ ದುರಾಸೆಗೆ ಪ್ರಕೃತಿ ವಿನಾಶ

ಯುವ ಸ್ವಯಂ ಸೇವಕರ ಪರಿಚಯಾತ್ಮಕ ತರಬೇತಿ ಶಿಬಿರ
Last Updated 25 ಮೇ 2017, 5:02 IST
ಅಕ್ಷರ ಗಾತ್ರ

ತುಮಕೂರು: ‘ಮನುಷ್ಯನ ದುರಾಸೆಗೆ ಪ್ರಕೃತಿ ಹಾಳಾಗುತ್ತಿದೆ. ನಗರ ಪ್ರದೇಶಗಳೂ ಹಾಳಾಗುತ್ತಿವೆ. ಯುವಕರು ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು’ ಎಂದು ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದರು.

ಬುಧವಾರ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಬೆಂಗಳೂರಿನ ನೆಹರು ಯುವ ಕೇಂದ್ರ ಸಂಘಟನೆ, ತುಮಕೂರಿನ ನೆಹರೂ ಯುವ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಯುವ ಸ್ವಯಂ ಸೇವಕರ ಪರಿಚಯಾತ್ಮಕ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ಯುವ ಸಮುದಾಯ ಸನ್ಮಾರ್ಗದಲ್ಲಿ ಸಾಗಿದಾಗ ದೇಶವೂ ಪ್ರಗತಿ ಪಥದತ್ತ ಸಾಗುತ್ತದೆ. ಹಿರಿಯರು ಯುವಕರಿಗೆ ಸರಿಯಾದ ರೀತಿ ಮಾರ್ಗದರ್ಶನ ಮಾಡಬೇಕು’ ಎಂದು ಅವರು ಹೇಳಿದರು.

ತುಮಕೂರು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎ.ಅಂದಪ್ಪ ಡೋನಿ ಮಾತನಾಡಿ, ಯುವಕರಿಂದಲೇ ದೇಶದ ಅಭಿವೃದ್ಧಿ ಸಾಧ್ಯ, ಬಸವಣ್ಣ ಅವರಂತೆ ಕಾಯಕ ನಿಷ್ಠರಾಗಿ ದೇಶದ ಅಭಿವೃದ್ಧಿಗೆ ಯುವಕರು ಶ್ರಮಿಸಬೇಕು’ ಎಂದು ಸಲಹೆ ನೀಡಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ.ಸಂಜಯ್ ನಾಯಕ್‌, ‘ಯುವಕರಿಗಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಬಳಸಿಕೊಳ್ಳುವ ಮೂಲಕ ಯುವಕರು ಅಭಿವೃದ್ಧಿಯ ಹಾದಿಯಲ್ಲಿ ಸಾಗಬೇಕು. ನೆಹರೂ ಯುವ ಕೇಂದ್ರ ನೀಡಿದ ತರಬೇತಿಯಿಂದಲೇ ನನ್ನ ವ್ಯಕ್ತಿತ್ವ ವಿಕಸನವಾಗಿದೆ. ನಾನು ವೃತ್ತಿಯಲ್ಲಿ ವೈದ್ಯನಾದರೂ ಪ್ರವೃತ್ತಿಯಲ್ಲಿ ಸಮಾಜ ಸೇವಕನಾಗಿದ್ದೇನೆ’ ಎಂದು ಹೇಳಿದರು.

ಸಂಘಟನೆ ರಾಜ್ಯ ನಿರ್ದೇಶಕ ಎಸ್.ಸತೀಶ್, ಮಂಡ್ಯ ಜಿಲ್ಲಾ ಸಮನ್ವಯಾಧಿಕಾರಿ ಸಿದ್ದರಾಮಪ್ಪ, ಹಾಸನ ಜಿಲ್ಲಾ ಸಮನ್ವಯಾಧಿಕಾರಿ ಅನಂತಪ್ಪ, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಎಚ್.ಕೆ.ಬಾಲಮಣಿ, ಉಪಪ್ರಾಂಶುಪಾಲ ನರಸಿಂಹಮೂರ್ತಿ, ರಾಜ್ಯ ಪ್ರಶಸ್ತಿ ಪುರಸ್ಕೃತ ವೀರೇಂದ್ರ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT