ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ’

Last Updated 25 ಮೇ 2017, 6:05 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಿಗೂ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಮಾಡಲು ಆದ್ಯತೆ ನೀಡಲಾಗು ವುದು ಎಂದು ಶಾಸಕ ಎಸ್.ತಿಪ್ಪೇಸ್ವಾಮಿ ಹೇಳಿದರು.

ಪಟ್ಟಣದ ಚನ್ನಬಸಯ್ಯನಹಟ್ಟಿ ಗ್ರಾಮದ ಮೂರು ಮತ್ತು ನಾಲ್ಕನೇ ವಾರ್ಡ್‌ಗಳಲ್ಲಿ ಬುಧವಾರ ಕುಡಿಯುವ ನೀರಿನ ಪೈಪ್‌ಲೈನ್‌, ಸಮುದಾಯ ಭವನ, ದೇವಾಲಯ ಜೀರ್ಣೋದ್ಧಾರ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಚನ್ನಬಸಯ್ಯನಹಟ್ಟಿ, ಕೊಂಡಯ್ಯನ ಕಪಿಲೆ, ಗಂಗಯ್ಯನ ಹಟ್ಟಿ ಗ್ರಾಮಗಳಿಗೆ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಪಟ್ಟಣ ಪಂಚಾಯ್ತಿಯಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು.

ಜಿಲ್ಲಾ ಟಾಸ್ಕ್‌ಫೋರ್ಸ್‌ನಿಂದ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ಕಲ್ಪಿಸಬೇಕೆಂದು ₹ 8.57 ಲಕ್ಷ ವೆಚ್ಚದಲ್ಲಿ ತಿಪ್ಪೇರುದ್ರಸ್ವಾಮಿ ಹಿರೆಕೆರೆಯಲ್ಲಿ ಮೂರು ಕೊಳವೆಬಾವಿಯನ್ನು ಕೊರೆಯಿಸಿ ಅಲ್ಲಿಂದ ಈ ಗ್ರಾಮಗಳಿಗೆ ಪ್ರತ್ಯೇಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡುವ ಯೊಜನೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಿಂದ ಈ ವಾರ್ಡ್‌ಗಳ ನಿವಾಸಿಗಳಿಗೆ ನೀರಿನ ಬವಣೆ ತಪ್ಪಲಿದೆ ಎಂದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ನೀಲಮ್ಮ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಎಂ.ವೈ.ಟಿ.ಸ್ವಾಮಿ, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್‌ ಅನ್ವರ್, ಮುಖ್ಯಾಧಿಕಾರಿ ಟಿ.ಜಯಪ್ಪ, ಎಂಜಿನಿಯರ್ ಮಧುಬಾಬು, ವಾರ್ಡ್‌ ಸದಸ್ಯೆ ಬೋರಮ್ಮ ಓಬಣ್ಣ, ಮುಖಂಡರಾದ ಪ.ಮ.ಗುರುಲಿಂಗಯ್ಯ, ಪಿ.ಶಿವಣ್ಣ, ಬಿ.ತಿಪ್ಪೇಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT