ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಜನಾ ಸಮಿತಿ ಚುನಾವಣೆ: ವೇಳಾಪಟ್ಟಿ

Last Updated 25 ಮೇ 2017, 6:17 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲಾ ಯೋಜನಾ ಸಮಿತಿಗೆ ಜಿಲ್ಲೆ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಪುರಸಭಾ ಮತ ಕ್ಷೇತ್ರಗಳಿಂದ ಪ್ರತ್ಯೇಕ ಸದಸ್ಯರ ಆಯ್ಕೆ ಕುರಿತು ಚುನಾವಣೆ ನಡೆಯಲಿದ್ದು, ಅಧಿಸೂಚನೆ ಹೊರಡಿಸಲಾಗಿದೆ ಎಂದು ಜಿಲ್ಲಾ ಯೋಜನಾ ಸಮಿತಿ ಚುನಾವಣಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಮತ ಕ್ಷೇತ್ರದಿಂದ 53 ಸದಸ್ಯರು  ಹಾಗೂ ಪುರಸಭಾ ಮತ ಕ್ಷೇತ್ರದಿಂದ 11 ಸದಸ್ಯರಿಗೆ ಚುನಾವಣೆ ನಡೆಯಲಿದೆ.

ಮೇ 25ರಿಂದ ಜೂನ್‌ 3ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನಗರ ಪ್ರದೇಶದ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಮಂಡ್ಯ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು.

ಜೂನ್‌ 6ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್‌ 9ರಂದು ಮಧ್ಯಾಹ್ನ 3ರಿಂದ 6ರವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.

ಮತದಾನ ಅಗತ್ಯವಾದಲ್ಲಿ ಜೂನ್‌ 15 ರಂದು ನಗರ ಪ್ರದೇಶದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಮತದಾನ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಜಿಲ್ಲಾ ಪಂಚಾಯಿತಿಯಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT