ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡ ಉದ್ಘಾಟನೆಗೆ ಆಗ್ರಹ

₹1.2 ಕೋಟಿ ವೆಚ್ಚದಲ್ಲಿ ನಿರ್ಮಾಣ
Last Updated 25 ಮೇ 2017, 7:07 IST
ಅಕ್ಷರ ಗಾತ್ರ

ಹನುಮಸಾಗರ: ಇಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಅನುದಾನದಡಿ ₹1.20 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಸಾರ್ವಜನಿಕರ ಸೇವೆಗೆ ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

‘ಕಟ್ಟಡ ನಿರ್ಮಾಣವಾಗಿ ಸುಮಾರು ಆರು ತಿಂಗಳು ಕಳೆದರೂ ಉದ್ಘಾಟನೆಯಾಗಿಲ್ಲ. ಹಳೆಯ ಕಟ್ಟಡದಲ್ಲಿ ಸ್ಥಳದ ಅಭಾವ ಇರುವುದರಿಂದ ರೋಗಿಗಳಿಗೆ, ಗರ್ಭಿಣಿಯರಿಗೆ ತುಂಬಾ ತೊಂದರೆಯಾಗಿದೆ. ಶಿಥಿಲಗೊಂಡಿರುವ ಹಳೆಯ ಕಟ್ಟಡವನ್ನೇ ಅವಲಂಬಿಸಬೇಕಾಗಿದೆ’ ಎಂದು ಗ್ರಾಮದ ಬಸವರಾಜ
ಪಾಟೀಲ ಹೇಳಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ಆನಂದ ಗೋಟೂರ ಮಾಹಿತಿ ನೀಡಿ, ‘ಸಣ್ಣ ಪುಟ್ಟ ಕೆಲಗಳು ಬಾಕಿ ಇವೆ. ಕಟ್ಟಡಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ತೆಗೆದುಕೊಳ್ಳಲಾಗಿದೆ.

ಕಾಯಂ ವಿದ್ಯುತ್ ಸಂಪರ್ಕ ಕಲ್ಪಿಸಿ ಹಸ್ತಾಂತರಿಸುವುದಾಗಿ ಗುತ್ತಿಗೆದಾರರು ತಿಳಿಸಿದ್ದಾರೆ. ಶೀಘ್ರ ಕಟ್ಟಡವನ್ನು ಪಡೆದು ಉದ್ಘಾಟನೆ ನೆರವೇರಿಸಲಾಗುವುದು’ ಎಂದು ತಿಳಿಸಿದರು.

‘ಆಸ್ಪತ್ರೆಯಲ್ಲಿ ಸದ್ಯ ಒಬ್ಬ ಆಯುಷ್ ವೈದ್ಯರಿದ್ದಾರೆ. ಇಲ್ಲಿಯ ಜನಸಂಖ್ಯೆಗೆ ಕನಿಷ್ಠ ಇಬ್ಬರು ವೈದ್ಯರ ಅವಶ್ಯಕತೆ ಇದೆ. ಸರ್ಕಾರ ವೈದ್ಯರನ್ನು ನೇಮಕ ಮಾಡಬೇಕು’ ಎಂದು ಶಿವಪ್ಪ ಹನುಮಸಾಗರ, ಪರಶುರಾಮ ಗುಡೂರ, ಹನುಮೇಶ ಕಬ್ಬರಗಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT