ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾರ್ಯಕರ್ತರಲ್ಲಿ ಭೇದ ಬೇಡ’

Last Updated 25 ಮೇ 2017, 10:02 IST
ಅಕ್ಷರ ಗಾತ್ರ

ಕೂಡ್ಲಿಗಿ: ‘ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಲ್ಲಿ ಯಾವುದೇ ಭೇದಭಾವ ಬೇಡ’ಎಂದು ಶಾಸಕ ಬಿ. ನಾಗೇಂದ್ರ ಹೇಳಿದರು.

ತಾಲ್ಲೂಕಿನ ಗಾಣಗಟ್ಟೆ ಗ್ರಾಮದ ಮಾಯಮ್ಮ ದೇವಿ ಕಲ್ಯಾಣ ಮಂಟಪದಲ್ಲಿ ಬುಧವಾರ ಏರ್ಪಡಿಸಿದ್ದ ಕೂಡ್ಲಿಗಿ ಮಂಡಲ ಬಿಜೆಪಿ ಘಟಕದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದರು.

‘ಸಮಾಜದ ಕಟ್ಟ ಕಡೆಯ ದುರ್ಬಲ ವರ್ಗದವರಿಗೂ ರಾಜಕೀಯ ಪ್ರಾತಿನಿದ್ಯ ಸಿಗಬೇಕಾಗಿದೆ. ಅದರಲ್ಲೂ ಮಹಿಳೆ ಯರು ಹೆಚ್ಚಾಗಿ ಸಕ್ರಿಯವಾಗಬೇಕು. ಪಕ್ಷ ಸಂಘಟನೆಗೆ ತಳಮಟ್ಟದ ಕಾರ್ಯಕರ್ತ ರನ್ನು ಒಗ್ಗೂಡಿಸ ಬೇಕಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಮೂಲಕ ಮುಂದಿನ ಚುನಾವಣೆಗೆ ನಾವು ಸಿದ್ಧ ರಾಗಬೇಕು’ಎಂದು ಹೇಳಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪೂಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ‘ಬಿಜೆಪಿ ಪಕ್ಷ ಕಾರ್ಯ ಕರ್ತರ ಆಧಾರಿತ ಪಕ್ಷವಾಗಿದೆ. ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು. ಅದ್ದರಿಂದ ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ. ಕಾಂಗ್ರೆಸ್ ವಂಶ ಪಾರಂಪರ್ಯ ಪಕ್ಷವಾಗಿದ್ದರೆ, ಜೆಡಿಎಸ್ ಅಪ್ಪ ಮಕ್ಕಳ ಪಕ್ಷವಾಗಿದೆ’ ಎಂದು ಟೀಕಿಸಿದರು.

‘ಪ್ರತಿಯೊಬ್ಬ ಕಾರ್ಯಕರ್ತನಿಗೂ ತನ್ನದೇ ಆದ ಜವಬ್ದಾರಿಯನ್ನು ಪಕ್ಷ ನೀಡಿದೆ. ಯಾರು ಕೂಡಾ ಅಧಿಕಾರಕ್ಕೆ ಅಂಟಿಕೊಳ್ಳದೆ ಪಕ್ಷ ಮತ್ತು ಸಮಾಜದ ಹಿತಕ್ಕಾಗಿ ದುಡಿಯಬೇಕು’ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಪಿ. ಚನ್ನಬಸವನಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಚ್. ವೀರನಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ. ವೆಂಕಟೇಶ್ ನಾಯ್ಕ್, ರಾಜ್ಯ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ, ಬಂಗಾರು ಹನುಮಂತು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬಸವೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರ್ಯಪಾಪಣ್ಣ, ವನಜಾಕ್ಷಮ್ಮ, ವಿಜಯಲಕ್ಷ್ಮಿ, ಎಸ್.ಪಿ. ಪ್ರಕಾಶ ಇದ್ದರು.

ನಂತರ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರುಣ್ ಕುಮಾರ್ ಹಾಗೂ ಕೇಶವ ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಕುರಿತು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT