ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುವಿನಲ್ಲಿ ಶಾಲಾ ಬಸ್ ಅಪಘಾತ ಸುದ್ದಿ ಸುಳ್ಳು; ಮಕ್ಕಳು ಸುರಕ್ಷಿತರಾಗಿದ್ದಾರೆ

Last Updated 25 ಮೇ 2017, 14:45 IST
ಅಕ್ಷರ ಗಾತ್ರ

ನವದೆಹಲಿ: ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದಿದ್ದ ಶಾಲಾ ಬಸ್‌ವೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದು ಕನಿಷ್ಠ 40 ಮಕ್ಕಳು ಸಾವಿಗೀಡಾಗಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಪೂಂಚ್ ಜಿಲ್ಲೆಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಗರೀಬ್ ನವಾಜ್ ಶಾಲೆಯ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಕಂದಕಕ್ಕೆ ಉರುಳಿ 40 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಮಾಡಿದ್ದವು. ಆದರೆ ಹೀಗೊಂದು ಅಪಘಾತ ನಡೆದಿಲ್ಲ. ಇದು ವದಂತಿಯಷ್ಟೇ.

ಇಲ್ಲಿ ಯಾವುದೇ ಅಪಘಾತಗಳು ನಡೆದಿಲ್ಲ. ಶಾಲಾ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಅಧಿಕಾರಿ ಮರ್ಸೂರ್ ಮೀರ್ ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT