ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಎಸ್ ನಿಯಂತ್ರಣ ಅಗತ್ಯ

Last Updated 25 ಮೇ 2017, 19:30 IST
ಅಕ್ಷರ ಗಾತ್ರ
ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಎಂಇಎಸ್‌ನ ವಾದ ಬೆಳಗಾವಿಯಲ್ಲಿ ಅಶಾಂತಿ ಸೃಷ್ಟಿಸುತ್ತಿದೆ. ಯಾವುದೇ ಪ್ರದೇಶದಲ್ಲಿ ಒಂದು ಭಾಷೆಯನ್ನು ಮಾತನಾಡುವ ಜನರು ಒಟ್ಟು ಜನಸಂಖ್ಯೆಯ ಶೇ15ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅವರಿಗೆ ತಮ್ಮ ಭಾಷೆಯಲ್ಲೇ ವ್ಯವಹರಿಸಲು ಕಾನೂನು ಅವಕಾಶ ನೀಡುತ್ತದೆ.

ಅದನ್ನು ನಮ್ಮ ಸರ್ಕಾರ ಪಾಲಿಸುತ್ತಿದೆ. ಆದರೆ ಅಕ್ಕಲಕೋಟೆ, ಸೊಲ್ಲಾಪುರ, ಕೊಲ್ಹಾಪುರದಂಥ  ಪ್ರದೇಶಗಳಲ್ಲಿರುವ ಕನ್ನಡಿಗರಿಗೆ ಮಹಾರಾಷ್ಟ್ರ ಸರ್ಕಾರ ಇಂಥ ಅವಕಾಶ ನೀಡಿಲ್ಲ. ಎಂಇಎಸ್‌ ಧೋರಣೆಗೆ ಕಡಿವಾಣ ಹಾಕಲು ಕಾನೂನು ರೂಪಿಸಬೇಕು. ಸಚಿವ ರೋಷನ್ ಬೇಗ್ ಹೇಳಿಕೆ ಸ್ವಾಗತಾರ್ಹ.  
ಸಿದ್ದಲಿಂಗ ಚೌಧರಿ, ಸಿಂದಗಿ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT