ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬರಿ ಮಸೀದಿ ಧ್ವಂಸ ಪ್ರಕರಣ ಅಡ್ವಾಣಿ, ಎಂ.ಎಂ. ಜೋಷಿ, ಉಮಾ ಭಾರತಿಗೆ ಸಮನ್ಸ್

Last Updated 25 ಮೇ 2017, 19:30 IST
ಅಕ್ಷರ ಗಾತ್ರ

ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಗೆ ಇದೇ 30ರಂದು ಖುದ್ದಾಗಿ ಹಾಜರಾಗುವಂತೆ ಬಿಜೆಪಿ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ ಹಾಗೂ ಉಮಾ ಭಾರತಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್ ಜಾರಿ ಮಾಡಿದೆ.

ಆರು ಆರೋಪಿಗಳ ಪೈಕಿ ಐದು ಮಂದಿ ಹಾಜರಾತಿಯಿಂದ ವಿನಾಯಿತಿ ಕೋರಿದ ಕಾರಣ ಇದೇ 30ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ, ಯಾವ ಕಾರಣಕ್ಕೂ ಮತ್ತೆ ವಿಚಾರಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರಕರಣದ ಆರು ಆರೋಪಿಗಳ ವಿರುದ್ಧ ಗುರುವಾರ ಆರೋಪಗಳನ್ನು  ನಿಗದಿಪಡಿಸುವುದಾಗಿ ಕೋರ್ಟ್ ಈ ಮೊದಲು ತಿಳಿಸಿತ್ತು.
ಆರು ಮಂದಿ ಪೈಕಿ ಆರೋಪಿ ಶಿವಸೇನಾ ಮುಖಂಡ ಸತೀಶ್ ಪ್ರಧಾನ್ ಅವರು ಮಾತ್ರ ಕೋರ್ಟ್‌ಗೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT