ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ: ಮಲಯಾಳ ಭಾಷೆ ಬೋಧನೆ–ಮಸೂದೆ ಅಂಗೀಕಾರ

Last Updated 25 ಮೇ 2017, 19:30 IST
ಅಕ್ಷರ ಗಾತ್ರ

ತಿರುವನಂತಪುರ: ರಾಜ್ಯದ ಎಲ್ಲ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಮಲಯಾಳವನ್ನು ಒಂದು ಭಾಷಾ ವಿಷಯವನ್ನಾಗಿ ಬೋಧಿಸಲು ಅವಕಾಶ ನೀಡುವ ಮಲೆಯಾಳ ಭಾಷಾ (ಬೋಧನೆ ಕಾಯ್ದೆ) ಮಸೂದೆ–2017  ಅನ್ನು ಕೇರಳ ವಿಧಾನಸಭೆ ಗುರುವಾರ ಅಂಗೀಕರಿಸಿದೆ.

ಆದರೆ, ಈ ಮಸೂದೆಯಿಂದ ‘ಕಡ್ಡಾಯ’ ಎಂಬ ಪದವನ್ನು ತೆಗೆಯಲು ಸರ್ಕಾರ ನಿರ್ಧರಿಸಿದೆ. ಇದಕ್ಕೂ ಮೊದಲು, ಶಾಲೆಗಳಲ್ಲಿ ಮಲಯಾಳ ಭಾಷೆಯನ್ನು ಬೋಧಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು.

ಅಂಗೀಕೃತ ಮಸೂದೆಯ ಅನ್ವಯ, ಶಾಲೆಗಳಲ್ಲಿ ಮಲೆಯಾಳ ಭಾಷೆ ಮಾತನಾಡುವ ವಿದ್ಯಾರ್ಥಿಗಳ ಮೇಲೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ನಿರ್ಬಂಧ ಹೇರುವಂತಿಲ್ಲ.

ಅರೇಬಿಕ್‌, ಉರ್ದು ಮತ್ತು ಸಂಸ್ಕೃತಗಳು ಮೊದಲ ಭಾಷಾ ವಿಷಯವಾಗಿರುವ ಶಾಲೆಗಳಲ್ಲಿ ಮಲಯಾಳ ಭಾಷೆಗೆ ಉತ್ತೇಜನ ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸಿ. ರವೀಂದ್ರನಾಥ್‌ ವಿಧಾನಸಭೆಗೆ ತಿಳಿಸಿದ್ದಾರೆ.

ವಿನಾಯಿತಿ: ಬೇರೆ ರಾಜ್ಯ ಮತ್ತು ವಿದೇಶದಿಂದ ಬರುವ ವಿದ್ಯಾರ್ಥಿಗಳು ಮಲಯಾಳ ಭಾಷೆ ಪರೀಕ್ಷೆ ತೆಗೆದುಕೊಳ್ಳುವುದಕ್ಕೆ ಈ ಮಸೂದೆ ವಿನಾಯಿತಿ ನೀಡಿದೆ.

ಆದರೆ, ಕೇರಳದ ರಾಜ್ಯ ಶಿಕ್ಷಣ ಮತ್ತು ಸಂಶೋಧನೆ ಹಾಗೂ ತರಬೇತಿ ಮಂಡಳಿ ಸಿದ್ಧಪಡಿಸಿರುವ ಪಠ್ಯಪುಸ್ತಕಗಳನ್ನು ಬಳಸಿ ಈ ವಿದ್ಯಾರ್ಥಿಗಳಿಗೆ ಮಲಯಾಳ ಭಾಷೆ ಬೋಧಿಸಬೇಕು ಎಂದು ಮಸೂದೆ ಹೇಳುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT