ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲ್ಗುಣಿ ನದಿಗೆ ಮಲಿನ ನೀರು: ಕ್ರಮಕ್ಕೆ ತಾಕೀತು

Last Updated 26 ಮೇ 2017, 5:48 IST
ಅಕ್ಷರ ಗಾತ್ರ

ಮಂಗಳೂರು: ಮರವೂರು ಸಮೀಪ ಫಲ್ಗುಣಿ ನದಿಗೆ ಕಾರ್ಖಾನೆಗಳು ಮಲಿನ ನೀರನ್ನು ಬಿಟ್ಟಿರುವುದು ಸರಿಯಲ್ಲ. ತಪ್ಪಿತಸ್ಥ ಕಾರ್ಖಾನೆ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮೊಹಮ್ಮದ್‌ ಮೋನು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಪಂಚಾಯಿತಿ ಸದಸ್ಯರು ಸಭೆಯಲ್ಲಿ, ನದಿ ನೀರು ಮಲಿನಗೊಂಡಿ ರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ‘ನದಿಗೆ ಕಲುಷಿತ ನೀರನ್ನು ಬಿಟ್ಟವರು ಯಾರು ಎಂಬುದನ್ನು ಪತ್ತೆ ಮಾಡಬೇಕು. ಅಗತ್ಯವಿದ್ದಲ್ಲಿ ಈ ಕುರಿತು ಪೊಲೀಸರಿಗೆ ದೂರು ನೀಡಲೂ ಸಿದ್ಧ’ ಎಂದು ಮರವೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೇಳಿದರು.

ಇದಕ್ಕೆ ಉತ್ತರಿಸಿದ ಮೊಹಮ್ಮದ್‌ ಮೋನು ಅವರು, ‘ತಪ್ಪಿತಸ್ಥ ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲೇಬೇಕು. ಈ ಕುರಿತು ನಿರ್ಣಯ ಅಂಗೀಕರಿಸಿ ಎಲ್ಲ ಪಂಚಾಯಿತಿಗಳಿಗೂ ಕಳುಹಿಸಲು ಸಿದ್ಧ. ಸಚಿವರು, ಶಾಸಕರು ಮತ್ತು ಇತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ದ್ದಾರೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾಡ ಳಿತವೇ ಕ್ರಮ ಕೈಗೊಳ್ಳಲಿದೆ’ ಎಂದು ಹೇಳಿದರು. 

ನದಿಗೆ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತವಾದಾಗ, ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವ ಹಣಾಧಿಕಾರಿ ಸದಾನಂದ, ‘ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಗಸ್ತು ಪಡೆ ಯನ್ನು ನಿಯೋಜಿಸಿದ್ದರೂ, ರಾತ್ರಿಯೇ ತ್ಯಾಜ್ಯ ಎಸೆಯುತ್ತಿರಬಹುದು. ಇದು ಬೇಸರದ ಸಂಗತಿ’ ಎಂದರು.

ಶಾಲೆಗಳಲ್ಲಿ ದಾಖಲಾತಿ ಆರಂಭವಾ ಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಿಗುತ್ತಿಲ್ಲ ಎಂಬ ಆರೋ ಪವಿದೆ ಎಂದು  ಸದಸ್ಯರಾದ ಶ್ರೀಧರ ಹೇಳಿದರು. ಇದಕ್ಕೆ ಉತ್ತರಿಸಿದ ತಹಶೀ ಲ್ದಾರ್‌ ಮಹದೇವಯ್ಯ, ‘ಸಿಬ್ಬಂದಿ ಕೊರತೆ ಇರುವುದರಿಂದ ವಿಳಂಬ ವಾಗಿದೆ. ಆದರೆ ಇರುವ ಸಿಬ್ಬಂದಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕಾರ್ಯ ನಿರ್ಹವಹಿಸುತ್ತಿದ್ದಾರೆ’ ಎಂದರು.

ತಾಲ್ಲೂಕು ಪಂಚಾಯಿತಿ ಸಭೆಯ ಮಾಹಿತಿ ಸಿಗದೇ ಇರುವ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ, ಅಧಿಕಾರಿಗ ಳನ್ನು ತರಾಟೆಗೆ ತೆಗೆದುಕೊಂಡ ಮೊಹ ಮ್ಮದ್‌ ಮೋನು ಅವರು, ಸಭೆಯ ಮಾಹಿತಿ ಸರಿಯಾದ ಸಮಯಕ್ಕೆ ನೀಡ ಬೇಕು ಎಂದು ಸಿಬ್ಬಂದಿ ವರ್ಗಕ್ಕೆ ತಾಕೀತು ಮಾಡಿದರು.

ಮಂಗಳೂರು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ರೀಟಾ ಕುಟಿನ್ಹೋ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಸದಾನಂದ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT