ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಜಿಪ್ಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ: ಬಸ್‌ನಲ್ಲಿದ್ದ 23 ಕ್ರೈಸ್ತರು ಸಾವು

Last Updated 26 ಮೇ 2017, 12:15 IST
ಅಕ್ಷರ ಗಾತ್ರ

ಕೈರೊ: ದಕ್ಷಿಣ ಈಜಿಪ್ಟ್‌ನಲ್ಲಿ ಆಗಂತುಕ ಬಂದೂಕುಧಾರಿಯೊಬ್ಬ ಶುಕ್ರವಾರ ಕ್ರೈಸ್ತರು ಪ್ರಯಾಣಿಸುತ್ತಿದ್ದ ಬಸ್‌ನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, 23 ಮಂದಿ ಸಾವಿಗೀಡಾಗಿದ್ದಾರೆ.

ಬಸ್ ದಕ್ಷಿಣ ಕೈರೋದಿಂದ 250 ಕಿ.ಮೀ. ದೂರದಲ್ಲಿನ ಮಿನ್ಯಾ ಗವರ್ನರೇಟ್‌ನ ಅನ್ಬೇ ಸಾಮ್ಯುಲ್‌ಗೆ ಚರ್ಚ್‌ಗೆ ತೆರಳುತ್ತಿತ್ತು.

ಘಟನೆಯಲ್ಲಿ 23 ಜನ ಮೃತಪಟ್ಟಿದ್ದು, ಉಳಿದಂತೆ 25 ಮಂದಿ ಗಾಯಗೊಂಡಿದ್ದಾರೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಚಿನ ಕೆಲ ತಿಂಗಳಲ್ಲಿ ಇಸ್ಲಾಮಿಕ್‌ ಸ್ಟೇಟ್‌(ಐಎಸ್) ಉಗ್ರ ಸಂಘಟನೆ ಹಲವು ದಾಳಿ ನಡೆಸಿದ್ದು, ದಾಳಿಗಳ ಹೊಣೆಯನ್ನೂ ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT