ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲ್ಯಾಪ್‌ಟಾಪ್‌ ಅಗತ್ಯ

Last Updated 26 ಮೇ 2017, 19:30 IST
ಅಕ್ಷರ ಗಾತ್ರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಕಲಿಕಾ ಸಾಮಗ್ರಿಯಾಗಿ ಒದಗಿಸಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವುದು ಸಂತೋಷದಾಯಕ. ಆದರೆ ಯಾವೆಲ್ಲ ವಿಭಾಗದ ವಿದ್ಯಾರ್ಥಿಗಳಿಗೆ ಈ ಭಾಗ್ಯ ದೊರೆಯುತ್ತದೆ ಎಂಬುದನ್ನು ಒಳಹೊಕ್ಕು ನೋಡಿದಾಗ, ಪ್ರಥಮ ಪದವಿ ಹಾಗೂ ಪ್ರಥಮ ವರ್ಷದ ವಿಜ್ಞಾನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮಾತ್ರವೆಂಬುದು ಗೊತ್ತಾಗುತ್ತದೆ.

ಕಲಾ ವಿಭಾಗದ ಸ್ನಾತಕೋತ್ತರ ಪದವಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪಿಎಚ್‌ಡಿ ಮಾಡುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ನ ಹೆಚ್ಚಿನ ಅಗತ್ಯವಿದೆ. ಆದರೆ ಈ ವಿದ್ಯಾರ್ಥಿಗಳನ್ನು ಪರಿಗಣಿಸದೇ ಇರುವುದು ದುರದೃಷ್ಟಕರ (ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರಗಳಲ್ಲಿ ಪಿಎಚ್‌ಡಿ ಮಾಡುವ ಪರಿಶಿಷ್ಟ ಜಾತಿ–ಪಂಗಡದ  ಸಂಶೋಧನಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಕೊಡಲಾಗುತ್ತದೆ).

ಬಹುಪಾಲು ಪರಿಶಿಷ್ಟ  ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದು, ಬಡವರಾಗಿರುತ್ತಾರೆ. ಅಧ್ಯಯನಕ್ಕೆ ಪೂರಕವಾಗಿ ಸೈಬರ್‌ ಸೆಂಟರ್‌ಗಳಿಗೆ ಹೆಚ್ಚು ವೆಚ್ಚ ಮಾಡಬೇಕಾಗುತ್ತದೆ. ಹಾಗಾಗಿ ಮೇಲ್ಕಾಣಿಸಿದ ಸೌಲಭ್ಯವಂಚಿತ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ಕೊಡುವ ಮೂಲಕ ಸಂಬಂಧಪಟ್ಟ ಇಲಾಖೆ ನೆರವಾಗಬೇಕಿದೆ.
- ಕೃಷ್ಣಪ್ಪ ಎನ್‌., ವೆಂಕಟೇಶ
ಸಂಶೋಧನಾ ವಿದ್ಯಾರ್ಥಿಗಳು, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT