ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಬಗೆಹರಿಸಿಕೊಳ್ಳಲು ಮನವಿ

Last Updated 27 ಮೇ 2017, 5:04 IST
ಅಕ್ಷರ ಗಾತ್ರ

ಚಿಂತಾಮಣಿ: ‘ಜಮೀನುಗಳ ಪಹಣಿ, ಖಾತಾ, ಮ್ಯುಟೇಷನ್‌ಗಳಲ್ಲಿನ ತಪ್ಪುಗಳನ್ನು ಸ್ಥಳದಲ್ಲಿಯೇ ತಿದ್ದುಪಡಿ ಮಾಡಲು ಹೋಬಳಿವಾರು ಕಂದಾಯ  ಅದಾಲತ್‌ಗಳನ್ನು ಆಯೋಜಿಸಲಾಗುತ್ತಿದೆ. ರೈತರು  ತಪ್ಪದೆ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ತಹಶೀಲ್ದಾರ್‌ ಎಂ.ಗಂಗಪ್ಪ ಮನವಿ ಮಾಡಿದರು.

ತಾಲ್ಲೂಕಿನ ಚಿನ್ನಸಂದ್ರ ಗ್ರಾಮ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಂದಾಯ ಅದಾಲತ್‌ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದರು.‘ಸರ್ಕಾರ ಪಹಣಿಗಳ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರ್‌ಗೆ ನೀಡಿದೆ. ಸಮಸ್ಯೆಗಳಿರುವ ರೈತರು ಉದಾಸೀನ ಮಾಡದೆ ಕಂದಾಯ ಅದಾಲತ್‌ಗಳಲ್ಲಿ ಭಾಗವಹಿಸಬೇಕು.

ಇದರಿಂದ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ. ರೈತರಿಗೆ ಸಮಯ, ಒಡಾಡುವ ಖರ್ಚು, ಶ್ರಮ ಇಲ್ಲದಂತಾಗುತ್ತದೆ. ದಾಖಲೆಗಳು ಸರಿಯಾಗಿದ್ದರೆ ಸ್ಥಳದಲ್ಲೇ ಆದೇಶಗಳನ್ನು ಮಾಡಲಾಗುವುದು. ಸಮಸ್ಯಾತ್ಮಕವಾಗಿದ್ದರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದರು.

‘ಬರಗಾಲದ ಘೋಷಣೆಯಿಂದಾಗಿ ಸರ್ಕಾರ ನೀಡುತ್ತಿರುವ ಬೆಳೆ ನಷ್ಟ ಪರಿಹಾರವನ್ನು ರೈತರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಪಹಣಿ, ಬ್ಯಾಂಕ್‌ ಪಾಸ್‌ ಪುಸ್ತಕ ಮುಂತಾದ ವಿವರಗಳನ್ನು ನೀಡಿರುವ ರೈತರಿಗೆ ಸಹಾಯ ಧನವನ್ನು ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಸರ್ಕಾರ ಹೊಸದಾಗಿ ತೆರೆದಿರುವ ಕೌಶಲ್ಯಾಭಿವೃದ್ಧಿ ತರಬೇತಿ ಇಲಾಖೆಯಿಂದ ನಿರುದ್ಯೋಗಿಗಳಿಗೆ ಉಚಿತ ಕೌಶಲ ತರಬೇತಿಗೆ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತಿಯುಳ್ಳ ನಿರುದ್ಯೋಗಿಗಳು ಹೆಸರು ನೋಂದಾಯಿಸಿಕೊಳ್ಳಬೇಕು. ತಾಲ್ಲೂಕಿನಲ್ಲಿ ಈಗಾಗಲೇ 500 ಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ’ ಎಂದರು.
ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT