ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ರಾಹುಲ್‌ ಡ್ರಾವಿಡ್‌ ಆರ್ಹ: ರಿಕಿ ಪಾಂಟಿಂಗ್‌

Last Updated 27 ಮೇ 2017, 5:35 IST
ಅಕ್ಷರ ಗಾತ್ರ

ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ರಾಹುಲ್‌ ಡ್ರಾವಿಡ್‌ ಪ್ರಸ್ತುತ ಟೀಂ ಇಂಡಿಯಾದ ‘ಎ’ ತಂಡ ಸೇರಿದಮತೆ 19 ವರ್ಷದೊಳಗಿನವರ ತಂಡದ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ದಿನಗಳಲ್ಲಿ ರಾಹುಲ್‌ ಡ್ರಾವಿಡ್‌ ಅವರು ಭಾರತ ಕ್ರಿಕೆಟ್‌ ತಂಡದ ಕೋಚ್ ಹುದ್ದೆ ನಿರ್ವಹಿಸಲು ಆರ್ಹರಾಗಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ನೇಮಕ ಮಾಡಲು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅರ್ಜಿ ಆಹ್ವಾನಿಸಿದೆ. ಇದರಿಂದಾಗಿ ಅನಿಲ್ ಕುಂಬ್ಳೆ ಅವರು ಮುಖ್ಯ ಕೋಚ್ ಸ್ಥಾನದಿಂದ ನಿರ್ಗಮಿಸುವುದು ಬಹುತೇಕ ಖಚಿತವಾಗಿದೆ.

ಮುಂದಿನ ತಿಂಗಳು ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿ ಮುಗಿದ ನಂತರ ಕುಂಬ್ಳೆ ಅವರ ಅವರ ಒಂದು ವರ್ಷದ ಅವಧಿಯ ಒಪ್ಪಂದವು ಪೂರ್ಣಗೊಳ್ಳಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

‘ಈ ಕುರಿತು ಬಿಸಿಸಿಐ ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ಭಾರತೀಯರನ್ನು ಆಯ್ಕೆ ಮಾಡುತ್ತದೆಯೋ ಅಥವಾ ವಿದೇಶಿಯರನ್ನು ಆಯ್ಕೆ ಮಾಡುತ್ತದೆಯೋ ತಿಳಿದಿಲ್ಲ. ಆದರೆ, ರಾಹುಲ್‌ ಡ್ರಾವಿಡ್‌ ಅವರಿಗಿಂತ ಉತ್ತಮ ಆಯ್ಕೆ ಮತ್ತೊಂದಿಲ್ಲ’ ಎಂದು ರಿಕಿ ಪಾಂಟಿಂಗ್‌ ತಿಳಿಸಿದ್ದಾರೆ.

ಡ್ರಾವಿಡ್‌ ಅವರಿಗೆ ಕ್ರಿಕೆಟ್‌ನ ಮೂರು ಮಾದರಿ ಆಟಕ್ಕೂ ಅಗತ್ಯವಿರುವ ಜ್ಞಾನವಿದ್ದು, ಯುವ ಆಟಗಾರರನ್ನು ಕಡಿಮೆ ಅವಧಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಸಿದ್ಧಪಡಿಸುವ ಸಾಮರ್ಥ್ಯವುಳ್ಳವರಾಗಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT