ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತಿಲ್ಲ’

Last Updated 27 ಮೇ 2017, 7:19 IST
ಅಕ್ಷರ ಗಾತ್ರ

ಯಾದಗಿರಿ: ‘ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಆದ್ದರಿಂದ ಪ್ರತಿ ಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು’ ಎಂದು ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಚಿಂಚನಸೂರ ಸಲಹೆ ನೀಡಿದರು.

ಸಮೀಪದ ಬದ್ದೇಪಲ್ಲಿ ಗ್ರಾಮದಲ್ಲಿ ದೃಷ್ಟಿ ಆಸ್ಪತ್ರೆ  ಹಾಗೂ ಬಸವೇಶ್ವರ ಟ್ರೇಡರ್ಸ್ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. 

‘ಗ್ರಾಮೀಣ ಭಾಗದ ಜನರು ಪಟ್ಟಣ ಪ್ರದೇಶಗಳಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಆರ್ಥಿಕ ಹೊರೆಯಾಗುತ್ತದೆ ಎಂಬುದನ್ನು ಮನಗಂಡ ಶರಣಬಸವ ಸ್ವಾಮೀಜಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ಶಿಬಿರದ ಸದುಪ ಯೋಗವನ್ನು ಗ್ರಾಮಸ್ಥರು ಪಡೆದುಕೊಳ್ಳ ಬೇಕು’ ಎಂದು ಸಲಹೆ ನೀಡಿದರು.

ಅಜಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಮಾತನಾಡಿ,‘ರಕ್ತದೊತ್ತಡ, ಸಕ್ಕರೆ ಕಾಯಿಲೆಗಳು ಒಮ್ಮೆ ಬಂದರೆ ಬದುಕಿ ನುದ್ದಕ್ಕೂ ಮುಂದುವರಿ ಯುತ್ತವೆ. ಅದಕ್ಕಾಗಿ ರೋಗಗಳು ಬಂದ ಮೇಲೆ ಆಸ್ಪತ್ರೆಗೆ ಓಡಾಡುವ ಬದಲಿಗೆ ಕಾಯಿಲೆ ಬಾರದಂತೆ ಜಾಗೃತಿ ವಹಿಸುವುದು ಅವಶ್ಯ’ ಎಂದು ಹೇಳಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪಂಚಮ ಸಿದ್ಧದಲಿಂಗ ಸ್ವಾಮೀಜಿ ನರಡ ಗುಂಬಿ ವಹಿಸಿದ್ದರು. ಗುರುಮಠಕಲ್‌ನ ಖಾಸಾ ಮಠದ ಶಾಂತವೀರ ಮುರುಘ ರಾಜೇಂದ್ರ ಸ್ವಾಮೀಜಿ ನೇತೃತ್ವ ವಹಿಸಿ ಆಶೀರ್ವಚನ ನೀಡಿದರು.

ದೃಷ್ಟಿ ಆಸ್ಪತ್ರೆಯ ವ್ಯವಸ್ಥಾಪಕ ಡಾ.ದಯಾನಂದ ಮೂರ್ತಿ, ಕಾಂಗ್ರೆಸ್‌ ಕಿಸಾನ ಘಟಕ ಅಧ್ಯಕ್ಷ ಬಸವರಾಜ ಯ್ಯಸ್ವಾಮಿ ಬದ್ದೇಪಲ್ಲಿ ಅಧ್ಯಕ್ಷತೆ ವಹಿಸಿ ದ್ದರು. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಸಮಿತಿ ಕಾರ್ಯದರ್ಶಿ ಭೀಮರೆಡ್ಡಿ ಪಾಟೀಲ ಶಟ್ಟಿಹಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಕ್ಯಾತನಾಳ, ಅಭಿಮನ್ಯು ಬದ್ದೇಪಲ್ಲಿ, ಶಿವಲಿಂಗರೆಡ್ಡಿ ಮಾಲಿ ಪಾಟೀಲ ಬದ್ದೇಪಲ್ಲಿ, ಡಾ.ರಾಜೇಶ್ವರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT