ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಶ್ವಾಸ ಕಳೆದುಕೊಂಡ ಕಾಂಗ್ರೆಸ್‌’

Last Updated 27 ಮೇ 2017, 7:38 IST
ಅಕ್ಷರ ಗಾತ್ರ

ಯಲಬುರ್ಗಾ: ‘ಮತದಾರರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ  ವಿಫಲವಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಲಪ್ಪ ಆಚಾರ ಟೀಕಿಸಿದರು.

ಪಟ್ಟಣದಲ್ಲಿ ಶುಕ್ರವಾರ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ, ‘ಕಾಂಗ್ರೆಸ್‌ ನಾಯಕರು ಕೊಟ್ಟ ಭರವಸೆ ಈಡೇರಿಲ್ಲ.  ಮಂತ್ರಿಗಳು ಖುರ್ಚಿ ಉಳಿಸಿಕೊಳ್ಳಲು ಸಮಯ ವ್ಯಯ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಜಿಲ್ಲೆಯಲ್ಲಿ ಅಕ್ರಮ ನಡೆದರೂ ಸಂಬಂಧವಿಲ್ಲದವರಂತೆ ನಡೆದುಕೊಳ್ಳುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು ಶೋಕಿಗಾಗಿ ಮಂತ್ರಿಯಾದಂತಿದೆ. ಸರ್ಕಾರ ಕೆರೆಗಳ ಅಭಿವೃದ್ಧಿಯನ್ನು  ನಿರ್ಲಕ್ಷಿಸಿರುವುದನ್ನು ಮನಗಂಡ  ದಾನಿಗಳು, ಪ್ರಗತಿಪರ ರೈತರು ಸೇರಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದಾರೆ’ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರಗೌಡ ಪಾಟೀಲ, ಮುಖಂಡರಾದ ನವೀನಕುಮಾರ ಗುಳಗಣ್ಣವರ, ಅರವಿಂದಗೌಡ ಪಾಟೀಲ, ಶಿವನಗೌಡ ಬನ್ನಪ್ಪಗೌಡ್ರ, ಪಟ್ಟಣ ಪಂಚಾಯಿತಿ ಸದಸ್ಯ ಸಿದ್ದರಾಮೇಶ ಬೇಲೇರಿ, ತಾಲ್ಲೂಕು ಅಧ್ಯಕ್ಷ ರತನ್‌ ದೇಸಾಯಿ, ಕೇಶವ, ಶರಣಪ್ಪ ಬಣ್ಣದಭಾವಿ, ಎ.ಜಿ. ಭಾವಿಮನಿ, ಶಿವಾನಂದ ಬಣಕಾರ, ಮಲ್ಲಣ್ಣ ನರೆಗಲ್ಲ, ನೀಲನಗೌಡ, ಸುರೇಶ ಹೊಸಳ್ಳಿ ಪ್ರಭುರಾಜ ಕಲಬುರ್ಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT