ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ

Last Updated 28 ಮೇ 2017, 6:54 IST
ಅಕ್ಷರ ಗಾತ್ರ

ನವದೆಹಲಿ: ಪ್ರೌಢ ಶಿಕ್ಷಣ ಕೇಂದ್ರ ಮಂಡಳಿಯು (ಸಿಬಿಎಸ್‌ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಭಾನುವಾರ ಪ್ರಕಟಿಸಿದೆ. ಇದರೊಂದಿಗೆ, ಫಲಿತಾಂಶದ ಬಗ್ಗೆ ಕಳೆದೊಂದು ವಾರದಿಂದ ಆತಂಕಿತರಾಗಿದ್ದ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.

ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ವಿಷಯಕ್ಕೆ ಸಂಬಂಧಿಸಿದ ಪ್ರಕ್ರಿಯೆಯನ್ನು ಮುಂದುವರಿಸುವಂತೆ ದೆಹಲಿ ಹೈಕೋರ್ಟ್‌ ಕಳೆದ ವಾರ ಆದೇಶಿಸಿತ್ತು. ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಮುಂದಾಗಿದ್ದ ಮಂಡಳಿ ಇದರಿಂದ ಫಲಿತಾಂಶ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಮನಗಂಡು ನಿರ್ಧಾರದಿಂದ ಹಿಂದೆ ಸರಿದಿತ್ತು.

ಸಿಬಿಎಸ್‌ಇ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿ ತಿಳಿಸಿದೆ. ಈ ವರ್ಷ 10 ಲಕ್ಷ ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT