ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

700 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ದೈಹಿಕ ಶಿಕ್ಷಕರೇ ಇಲ್ಲ !

Last Updated 28 ಮೇ 2017, 20:01 IST
ಅಕ್ಷರ ಗಾತ್ರ

ಬೆಂಗಳೂರು: ಈ ಶಾಲೆಯಲ್ಲಿ 700 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಸುಸಜ್ಜಿತ ಮೈದಾನ, ಕ್ರೀಡಾ ಪರಿಕರಗಳೂ ಇವೆ. ಆದರೆ ಮಕ್ಕಳಿಗೆ ಕ್ರೀಡಾ ತರಬೇತಿ ನೀಡಲು ದೈಹಿಕ ಶಿಕ್ಷಣ ಶಿಕ್ಷಕರೇ ಇಲ್ಲಿಲ್ಲ!

ಚಿಕ್ಕಬಾಣಾವರದ ಮಾದರಿ ಪ್ರಾಥಮಿಕ ಶಾಲೆಯ ಪರಿಸ್ಥಿತಿ ಇದು.

ಒಂದರಿಂದ ಏಳನೇಯ ತರಗತಿಯ ತನಕ ಶಿಕ್ಷಣ ನೀಡುತ್ತಿರುವ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರನ್ನು ಎರಡು ವರ್ಷಗಳ ಹಿಂದೆ ವರ್ಗಾವಣೆ ಮಾಡಲಾಗಿದೆ. ಇದುವರೆಗೂ ಹೊಸ ಶಿಕ್ಷಕರನ್ನು ನೇಮಿಸಿಲ್ಲ. ಹಾಗಾಗಿ ಈ ಶಾಲೆಯಲ್ಲಿ ಕ್ರೀಡಾ ಚಟುವಟಿಕೆ ಬಹುತೇಕ ಸ್ಥಗಿತವಾಗಿದೆ.

‘ಈ ಭಾಗದಲ್ಲಿರುವ ಏಕೈಕ ಶಾಲೆ ಇದಾಗಿದೆ. ಕೆಂಪಾಪುರ, ದ್ವಾರಕಾ ನಗರ, ಮಾರುತಿ ನಗರಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಾರೆ. ಶಾಲೆಯಲ್ಲಿರುವ ಕೇರಂ, ಫುಟ್‌ಬಾಲ್, ಕ್ರಿಕೆಟ್, ಡಿಸ್ಕ್‌ ಥ್ರೋ ಕ್ರೀಡಾ ಸಾಮಗ್ರಿಗಳು ಮೂಲೆಗುಂಪಾಗಿವೆ.   ಸರ್ಕಾರ ಈ ವರ್ಷವಾದರೂ ಶಿಕ್ಷಕರನ್ನು ನೇಮಿಸಬೇಕು’ ಎಂದು ವಿದ್ಯಾರ್ಥಿಗಳ ಪೋಷಕರು  ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT