ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ 3ರಂದು ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ

Last Updated 29 ಮೇ 2017, 6:28 IST
ಅಕ್ಷರ ಗಾತ್ರ

ಗೌರಿಬಿದನೂರು: ‘ಬಯಲು ಸೀಮೆ ಜಿಲ್ಲೆಗಳು ದಶಕದಿಂದ ಬರಗಾಲಕ್ಕೆ ತುತ್ತಾಗಿವೆ.   ಇಲ್ಲಿನ ರೈತರು ಹಾಗೂ ಕೂಲಿ ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಗಳು ಮತ್ತು ಅಧಿಕಾರಿಗಳು ಸ್ಪಂದಿಸು ತ್ತಿಲ್ಲ’ ಎಂದು ಸಿಪಿಎಂ ಮುಖಂಡ ಸಿದ್ದಗಂಗಪ್ಪ ಆರೋಪಿಸಿದರು.

ಪಕ್ಷ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಹಾ ಕಾಲ್ನಡಿಗೆ ಜಾಥಾ ಅಂಗವಾಗಿ ಪಟ್ಟಣದ ಗಾಂಧಿ ವೃತ್ತದಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ‘ರೈತರ ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಜೂನ್ 3 ರಂದು ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ತಿಳಿಸಿದರು.

‘ರಾಜ್ಯ ಹಾಗೂ ಕೇಂದ್ರ ಸರ್ಕಾರ ಗಳು  ಬಂಡವಾಳ ಶಾಹಿಗಳ ಪರವಾಗಿ ಆರ್ಥಿಕ ನೀತಿಗಳನ್ನು ಜಾರಿಗೊಳಿಸುತ್ತಿವೆ. ರೈತ ವಿರೋಧಿ ನೀತಿಗಳನ್ನು ಅನುಸರಿ ಸುತ್ತಿವೆ. ರೈತರು ಜೀವನ ನಿರ್ವಹಣೆಗಾಗಿ ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಬೆಳೆ ನಷ್ಟ ಪರಿಹಾರವನ್ನು ಎಕರೆಗೆ ₹ 25 ಸಾವಿರ ನೀಡಬೇಕು. ಅಗತ್ಯ ವಿರುವ ಕಡೆಗಳಲ್ಲಿ ಮೇವು ಬ್ಯಾಂಕ್ ತೆರೆಯಬೇಕು. ಕಾರ್ಮಿಕರಿಗೆ ಕನಿಷ್ಠ ₹ 350 ಕೂಲಿ ನೀಡಬೇಕು. ಬಗರ್ ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು. ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ರಹಿತರಿಗೆ ನಿವೇಶನ ಹಾಗೂ ವಸತಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯಲ್ಲಿ 565 ಕಿಲೋ ಮೀಟರ್ ಜಾಥಾ ಹಮ್ಮಿಕೊಳ್ಳಲಾಗಿದೆ. 500 ಗ್ರಾಮಗಳಲ್ಲಿ ಸಂಚರಿಸಲಿದೆ. ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತ ಕಚೇರಿ ಎದುರು ನಡೆಸುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ ಮಾತನಾಡಿದರು. ತಾಲ್ಲೂಕು  ಘಟಕದ ಕಾರ್ಯದರ್ಶಿ ಸಿ.ಸಿ.ಅಶ್ವತ್ಥಪ್ಪ, ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಸಾವಿತ್ರಮ್ಮ, ಗೋಪಿನಾಥ್,ಅನ್ವರ್ ಬಾಷಾ, ಆನೂಡಿ ನಾಗರಾಜು, ಗಂಗಾಧರಪ್ಪ, ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT