ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ವತಮ್ಮ ರಾಜ್‌ಕುಮಾರ್‌ ಇನ್ನಿಲ್ಲ

Last Updated 31 ಮೇ 2017, 6:18 IST
ಅಕ್ಷರ ಗಾತ್ರ

ಬೆಂಗಳೂರು: ನಟ ಡಾ.ರಾಜ್‌ಕುಮಾರ್‌ ಅವರ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್‌ ಅವರು ಬುಧವಾರ ಬೆಳಿಗ್ಗೆ ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಕಂಠೀರವ ಸ್ಟುಡಿಯೊದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

*
ಪಾರ್ವತಮ್ಮ ಅವರು1939ರಲ್ಲಿ ಮೈಸೂರು ಜಿಲ್ಲೆ ಸಾಲಿಗ್ರಾಮದಲ್ಲಿ ಜನಿಸಿದ್ದರು. 1953ರಲ್ಲಿ ರಾಜ್‌ಕುಮಾರ್‌ ಅವರೊಂದಿಗೆ ಪಾರ್ವತಮ್ಮ ಅವರ ವಿವಾಹವಾಗಿತ್ತು. ವಜ್ರೇಶ್ವರಿ ಚಿತ್ರ ನಿರ್ಮಾಣ ಸಂಸ್ಥೆಯ ಮೂಲಕ ಅವರು ಹಲವು ಚಿತ್ರಗಳನ್ನು ನಿರ್ಮಿಸಿದ್ದರು.

ಪಾರ್ವತಮ್ಮ ಅವರು ನಿರ್ಮಿಸಿದ ಮೊದಲ ಚಿತ್ರ ‘ತ್ರಿಮೂರ್ತಿ’. ‘ಹಾಲು ಜೇನು’, ‘ಕವಿರತ್ನ ಕಾಳಿದಾಸ’, ‘ಜೀವನ ಚೈತ್ರ’ ಸೇರಿದಂತೆ ಸುಮಾರು 80 ಚಿತ್ರಗಳನ್ನು ಅವರು ನಿರ್ಮಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT