ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟದ ಸೇವೆ ಒದಗಿಸಲು ಬದ್ಧ: ಕೇಂದ್ರ ಸಚಿವ

Last Updated 9 ಜೂನ್ 2017, 10:35 IST
ಅಕ್ಷರ ಗಾತ್ರ

ಹಾಸನ: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದಲ್ಲೇ ಭಾರತ ಮುಂಚೂಣಿಯಲಿದ್ದು, ಕೇಂದ್ರ ಸರ್ಕಾರ ದೇಶದ ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರವನ್ನು ಡಿಜಿಟಲೀಕರಣ ಮಾಡಲು ಶ್ರಮಿಸುತ್ತಿದೆ ಎಂದು ಕೇಂದ್ರ ಕಾನೂನು, ನ್ಯಾಯ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿ ಹೇಳಿದರು.

ನಗರದ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಅಮೆರಿಕಾ ಹಾಗೂ ಯುರೋಪ್ ರಾಷ್ಟ್ರಗಳು ಸೇರಿದಂತೆ ವಿಶ್ವದ ಇತರೆ ಎಲ್ಲ ರಾಷ್ಟ್ರಗಳಿಗಿಂತ ದೇಶದಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದೆ. ಹೀಗಾಗಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ  ದೇಶದ ಯುವಕರು ಹೆಚ್ಚು ಸಾಧನೆ ಮಾಡಿದ್ದು, ಇದರಿಂದ ವಿಶ್ವದ ಇತರ ರಾಷ್ಟ್ರಗಳು ಭಾರತದ ಕಡೆಗೆ ತಿರುಗಿ ನೋಡುವಂತಾಗಿದೆ.

ದೇಶದಲ್ಲಿ 83 ಕೋಟಿ ಅಷ್ಟು ಜನ ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿಸಿದರು. ‌ಶಿಕ್ಷಣ, ಆರೋಗ್ಯ ಹಾಗೂ ಕೃಷಿ ಕ್ಷೇತ್ರವನ್ನು ಸಂಪೂರ್ಣವಾಗಿ ಡಿಜಿಟಲ್ ಮಾಡುವುದರಿಂದ ಗ್ರಾಮೀಣ ಭಾಗದ ಜನರಿಗೆ ಗುಣ ಮಟ್ಟದ ಸೇವೆ ಒದಗಿಸಲು ಸಾಧ್ಯವಾಗಿದೆ ಎಂಬುದನ್ನು ಅರಿತು ಕೊಂಡಿದೆ. 

ಶಿಕ್ಷಣ ಕ್ಷೇತ್ರದಲ್ಲಿ ಸಂಶೋಧನೆ ನಡೆಸುವ ಅಧ್ಯಾಪಕರು ಹಾಗೂ ಇತರೆ ವಿಷಯಗಳನ್ನು ತ್ರಿಡಿ ಗುಣಮಟ್ಟದ ಚಿತ್ರೀಕರಣ ಮಾಡಿ ಅವುಗಳನ್ನು ದೇಶದ ಇತರೆ ಭಾಗದ ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಪ್ರಯತ್ನ ನಡೆಸಲಾಗುತ್ತಿದೆ.  ಆರೋಗ್ಯ ಕ್ಷೇತ್ರದ ಸೇವೆಯನ್ನು ಗ್ರಾಮೀಣ ಹಂತದ ವರೆಗೆ ತಲುಪಿಸಲು ಅಂತರ್ಜಾಲದ ಅವಶ್ಯಕತೆ ಇದ್ದು, ಸಣ್ಣಪುಟ್ಟ ಕಾಯಿಲೆಗಳ ಮುಂಜಾಗ್ರತೆ ಸೇರಿದಂತೆ ಇತರೆ ವಿಷಯಗಳನ್ನು  ತಲುಪಿಸುವ ಪ್ರಯತ್ನ ನಡೆಸಲಾಗುತ್ತಿದೆ.

ಹಾಗೆಯೇ ಕೃಷಿ ಕ್ಷೇತ್ರವನ್ನು ಡಿಜಿಟಲ್ ಮಾಡುವುದರಿಂದ ರೈತರು ಹಾಗೂ ವ್ಯಾಪಾರಿಗಳು ಆನ್‌ಲೈನ್‌ ಮೂಲಕ ನೇರ ವ್ಯಾಪಾರ ವಹಿವಾಟು ನಡೆಸಬಹುದಾಗಿದೆ ಎಂದು     ತಿಳಿಸಿದರು. ಗ್ರಾಮೀಣ ಭಾಗದಲ್ಲಿ ಇಂದಿಗೂ ಆಯುರ್ವೇದ ಚಿಕಿತ್ಸೆ ಜೀವಂತವಾಗಿದ್ದು, ಮುಂದಿನ ದಿನಗಳಲ್ಲಿ ಆಯುರ್ವೇದ ಚಿಕಿತ್ಸೆಗೆ ಮಹತ್ವ ದೊರೆಯಲಿದೆ.

ಬ್ರಿಟಿಷರು ಭಾರತದಿಂದ ಎಲ್ಲಾ ಸಂಪತ್ತು  ದೋಚಿಕೊಂಡು ಹೋದರೂ ದೇಶದ ಜನರು ಮಾತ್ರ ಧರ್ಮದ ಮೇಲಿನ ನಂಬಿಕೆ ಹಾಗೂ ಆಯುರ್ವೇದ ಚಿಕಿತ್ಸೆ ಮೇಲಿರುವ ನಂಬಿಕೆ ಕಳೆದುಕೊಳ್ಳಲಿಲ್ಲ ಎಂದರು. ವಿಧಾನ ಪರಿಷತ್ ಸದಸ್ಯ ಲಹರ್ ಸಿಂಗ್,  ಕಾಲೇಜಿನ ಪ್ರಾಂಶುಪಾಲ ಡಾ. ಪ್ರಸನ್ನ ಎನ್. ರಾವ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯೋಗಾರಮೇಶ್  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT