ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಂತರ ಕೃಷಿ ಮಾಹಿತಿ ಪಡೆಯಿರಿ

Last Updated 14 ಜೂನ್ 2017, 9:24 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ರೈತರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನಿರಂತರ ಕೃಷಿ ಮಾಹಿತಿಯನ್ನು ಪಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ರಮೇಶ್ ಮಂಗಳವಾರ ಸಲಹೆ ನೀಡಿದರು.

ಪಟ್ಟಣದ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರವಣಬೆಳಗೊಳ ಹೋಬಳಿಮಟ್ಟದ ಸಮಗ್ರ ಕೃಷಿ ಅಭಿಯಾನ ಕೃಷಿ ವಸ್ತು ಪ್ರದರ್ಶನ, ಹಾಗು ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ನಾಮ ನಿರ್ದೇಶಿತ ಸದಸ್ಯ ಪಿ.ನಾಗರಾಜು ಮಾತನಾಡಿ, ‘ಪ್ರತಿಯೊಂದು ಯೋಜನೆಯ ರೈತ ಫಲಾನುಭವಿಗಳ ಹೆಸರನ್ನು ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಬೇಕು’ ಎಂದು ಆಗ್ರಹಿಸಿದರು.

ಪ್ರಗತಿಪರ ರೈತ ಬೆಕ್ಕದ ಬಿ.ರಾಘವೇಂದ್ರ ಮಾತನಾಡಿದರು. ಕೃಷಿ ಸಂವಾದ ಕಾರ್ಯಕ್ರಮದಲ್ಲಿ ಕೃಷಿ ತಜ್ಞರಾದ ಕಾರೆಕೆರೆಯ ಕೃಷಿಮಹಾವಿದ್ಯಾಲಯ ಪ್ರಾಧ್ಯಾಪಕರಾದ ಡಾ.ಮುನಿ ಸ್ವಾಮಿ ಗೌಡ, ಪಟ್ಟಣದ ಪಶು ಆಸ್ಪತ್ರೆಯ ವೈಧ್ಯಾಧಿಕಾರಿಗಳಾದ ಡಾ.ಶ್ರೀಧರ್‌ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಸೌಮ್ಯಾ ಚಂದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ಚನ್ನರಾಯಪಟ್ಟಣ ಕಾವೇರಿ ಗ್ರಾಮೀಣ ಬ್ಯಾಂಕಿನ ಆರ್ಥಿಕ ತಜ್ಞರಾದ ಎ.ಎಸ್‌.ರಾಮಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮಂಜುಳಾ ಎಂ.ಶಂಕರೇಗೌಡ ಎ.ಪಿ.ಎಂ.ಸಿ ಸದಸ್ಯರಾದ ಶಿಲ್ಪಾ ಶ್ರೀನಿವಾಸ್‌ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೃಷಿಗೆ ಸಂಬಂಧಪಟ್ಟ ಪರಿಕರಗಳ, ಬೀಜಗಳ, ಯಂತ್ರೋಪಕರಣಗಳ, ರೇಷ್ಮೆ, ತೋಟಗಾರಿಕೆ ಮೀನುಗಾರಿಕೆಗೆ ಸಂಬಂಧಿಸಿದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಹೇಮಾ ಪ್ರಭಾಕರ್‌, ತಾ.ಪಂ. ಸದಸ್ಯರಾದ ರೂಪರಾಣಿ ಶ್ರೀಧರ್‌, ಮಹಾಲಕ್ಷ್ಮಿ ಶಿವರಾಜ್‌ ಜಿಲ್ಲಾ ರೈತ ಸಂಚಾಲಕ ಮೀಸೆ ಮಂಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT