ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ತಿಂಗಳಿಂದ ಮಾತನಾಡದ ಕುಂಬ್ಳೆ–ಕೊಹ್ಲಿ?

Last Updated 22 ಜೂನ್ 2017, 9:19 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ಮತ್ತು ನಾಯಕ ವಿರಾಟ್ ಕೊಹ್ಲಿ ಅವರ ನಡುವೆ ಕಳೆದ ಆರು ತಿಂಗಳಿಂದ ಪರಸ್ಪರ ಮಾತಾಡುತ್ತಿರಲಿಲ್ಲವಂತೆ. ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

‘ಹೋದ ಡಿಸೆಂಬರ್‌ನಲ್ಲಿ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯ ನಂತರ ಇಬ್ಬರ ನಡುವೆ ಮಾತುಕತೆ ನಿಂತಿತ್ತು. ಯಾವ ರೀತಿಯ ಸಮಸ್ಯೆಗಳಿದ್ದವು ಎಂಬುದು ಗೊತ್ತಿಲ್ಲ. ಆದರೆ ಇಬ್ಬರ ನಡುವಿನ ಸಂಬಂಧ ಹಳಸಿತ್ತು.

ಜೂನ್ 18ರಂದು ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ನಂತರ ಅವರಿಬ್ಬರೊಂದಿಗೆ ಬಿಸಿಸಿಐ ಪ್ರತಿನಿಧಿಗಳು ಚರ್ಚಿಸಿದರು. ನಂತರ  ಅವರು ತಮ್ಮಿಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದರು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT