ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪೂರ್ಣ ಸಾಲ ಮನ್ನಾ ಮಾಡಲಿ

Last Updated 22 ಜೂನ್ 2017, 9:49 IST
ಅಕ್ಷರ ಗಾತ್ರ

ತಿಪಟೂರು: ‘ರೈತರ ಎಲ್ಲಾ ಸಾಲವನ್ನು ಸರ್ಕಾರಗಳೇ ಭರಿಸಬೇಕು’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದರು.
ತಾಲ್ಲೂಕಿನ ನೋಣವಿನಕೆರೆಯಲ್ಲಿ ಬುಧವಾರ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕ ಹಾಗೂ ಹೋಬಳಿ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬರದ ನಡುವೆ ರೈತರು
ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರು ಸರ್ಕಾರಕ್ಕೆ ಋಣಿ ಗಳಲ್ಲ. ಸರ್ಕಾರವೇ ರೈತರ ಋಣದಲ್ಲಿದೆ. ದೆಹಲಿಯಲ್ಲಿ  ರೈತರ ಸಮ್ಮೇಳನ ನಡೆಸಿದೇಶದ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.‘ನೀರಾವರಿಗೆ ಆದ್ಯತೆ ನೀಡಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸಬೇಕು’ ಎಂದು ಒತ್ತಾಯಿಸಿದರು.

ಅಲ್ಬೂರು ಶನೇಶ್ವರಸ್ವಾಮಿ ಮಠದ ಸ್ವಾಮೀಜಿ ಮಾತನಾಡಿದರು. ವೈದ್ಯ ಡಾ.ಚನ್ನಕೇಶವ, ರೈತ ಚನ್ನಬಸವಣ್ಣ ಅವರನ್ನು ಸನ್ಮಾನಿಸಲಾಯಿತು. ಮಹಾಲಕ್ಷ್ಮಿ ಪೀಠದ ಸ್ವಾಮೀಜಿ, ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಿ.ಎಸ್.ದೇವರಾಜು. ಜಿಲ್ಲಾ ಘಟಕದ ಅಧ್ಯಕ್ಷ ಶಂಕರಣ್ಣ, ತಾಲ್ಲೂಕು ಘಟಕದ ಅಧ್ಯಕ್ಷ ಯೋಗೀಶ್ವರಸ್ವಾಮಿ, ಹಸಿರು ಸೇನೆ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್, ನೀರಾವರಿ ಸಮಿತಿಯ ಅಧ್ಯಕ್ಷ ಎಸ್.ವಿ. ಸ್ವಾಮಿ, ಗಂಗಾಧರ್ ಇದ್ದರು.

ನಂತರ ನೊಣವಿನಕೆರೆ ಕೆರೆಯಿಂದ ತಿಪಟೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ವಿರೋಧಿಸಿ ರೈತರು ಬೈಕ್ ರ್‍ಯಾಲಿ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT