ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಣ್ಣಂಗೂರು ಯೋಧ ಹುತಾತ್ಮ

Last Updated 22 ಜೂನ್ 2017, 11:10 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಪಶ್ಚಿಮ ಬಂಗಾಳದ ಡಾರ್ಜಲಿಂಗ್ ಗಡಿಭಾಗದಲ್ಲಿ ಬುಧವಾರ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ತಾಲ್ಲೂಕಿನ ಶಿಡ್ಲಘಟ್ಟ ತಾಲೂಕಿನ ಯಣ್ಣಂಗೂರು ಗ್ರಾಮದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧ ಗಂಗಾಧರ್ (39) ವೀರಮರಣ ಹೊಂದಿದ್ದಾರೆ.

ಹುತಾತ್ಮ ಯೋಧನಿಗೆ ತಂದೆ–ತಾಯಿ, ವೈದ್ಯೆಯಾಗಿರುವ ಪತ್ನಿ ಡಾ.ಶಿಲ್ಪಾ ಮತ್ತು 10 ವರ್ಷದ ಪುತ್ರ ಇದ್ದಾರೆ. ಯಣ್ಣಂಗೂರು ಗ್ರಾಮದ ಮುನಿಯಪ್ಪ ಲಕ್ಷ್ಮಮ್ಮ ದಂಪತಿಗಳ ಹಿರಿಯ ಮಗನಾದ ಗಂಗಾಧರ್‌ ಅವರು ಕಳೆದ 20 ವರ್ಷಗಳಿಂದ ಬಿಎಸ್‌ಎಫ್‌ನಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT