ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಕೂಟಗಳಲ್ಲಿ ಆಡದ ದೀಪಾ ಕರ್ಮಾಕರ್‌

Last Updated 22 ಜೂನ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಅಗ್ರಗಣ್ಯ ಜಿಮ್ನಾಸ್ಟಿಕ್ಸ್‌ ಪಟು ದೀಪಾ ಕರ್ಮಾಕರ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಣಕ್ಕಿಳಿಯುತ್ತಿಲ್ಲ.

ರಿಯೊ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿ ಇತಿಹಾಸ ನಿರ್ಮಿಸಿದ್ದ ದೀಪಾ ಅವರು ಏಪ್ರಿಲ್ ತಿಂಗಳಿನಲ್ಲಿ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದರಿಂದ ಚೇತರಿಸಿಕೊಳ್ಳಲು ಇನ್ನೂ ಹೆಚ್ಚು ಸಮಯ ಹಿಡಿಯಲಿದೆ.

23 ವರ್ಷದ ಜಿಮ್ನಾಸ್ಟ್‌ ಇತ್ತೀಚೆಗೆ ಏಷ್ಯನ್ ಚಾಂಪಿಯನ್‌ಷಿಪ್‌ನಲ್ಲಿ ಕೂಡ ಕಣಕ್ಕಿಳಿದಿರಲಿಲ್ಲ.

ವಿಶ್ವ ಚಾಂಪಿಯನ್‌ಷಿಪ್‌ ಕೆನಡಾದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದೆ. ದೀಪಾ ಕರ್ಮಾಕರ್‌ ಚೇತರಿಸಿಕೊಂಡ ಬಳಿಕ ಆರು ತಿಂಗಳು ಸತತವಾಗಿ ಅಭ್ಯಾಸ ನಡೆಸಬೇಕಾಗಿರುವುದರಿಂದ ಈ ಟೂರ್ನಿ ಆಡಲು ಸಾಧ್ಯವಿಲ್ಲ.

‘ಜಿಮ್ನಾಸ್ಟಿಕ್‌ಪಟುಗಳಿಗೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತದೆ.  ಅಥ್ಲೀಟ್‌ಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ಆದರೆ ಇದರಿಂದ ಹೊರಬರಲು ಸಾಕಷ್ಟು ಸವಾಲುಗಳನ್ನು ಎದುರಿಸಬೇಕು’ ಎಂದು ಕರ್ಮಾಕರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT