ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರವೇಶ ಅಲ್ಲಗಳೆದಿಲ್ಲ ಚರ್ಚೆ ನಡೆದಿದೆ: ರಜನಿಕಾಂತ್‌

Last Updated 22 ಜೂನ್ 2017, 19:30 IST
ಅಕ್ಷರ ಗಾತ್ರ

ಚೆನ್ನೈ: ರಾಜಕೀಯ ಪ್ರವೇಶದ ಬಗ್ಗೆ ಸದಾ ಕುತೂಹಲ ಮೂಡಿಸುತ್ತಲೇ ಬಂದಿರುವ ನಟ ರಜನಿಕಾಂತ್‌, ಒಂದೊಂದು ಬಾರಿ ಒಂದೊಂದು ರೀತಿ ಹೇಳಿಕೆ ನೀಡುತ್ತಿದ್ದಾರೆ. ಈ ಬಾರಿ ರಾಜಕೀಯಕ್ಕೆ ಧುಮುಕುವ ಬಗ್ಗೆ ಹೆಚ್ಚಿನ ಸುಳಿವು ನೀಡುವಂತೆ  ಮಾತನಾಡಿದ್ದಾರೆ.

‘ರಾಜಕೀಯ ಪ್ರವೇಶ ಸಾಧ್ಯತೆಯನ್ನು ನಾನು ತಳ್ಳಿಹಾಕಿಲ್ಲ. ಈ ಬಗ್ಗೆ ನಾವು ಚರ್ಚೆ ನಡೆಸುತ್ತಲೇ ಇದ್ದೇವೆ. ಒಮ್ಮೆ ಅಂತಿಮ ನಿರ್ಧಾರ ಕೈಗೊಂಡ ಬಳಿಕ ಈ ಬಗ್ಗೆ ಘೋಷಣೆ ಮಾಡುತ್ತೇನೆ’ ಎಂದು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರಿಗೆ ತಿಳಿಸಿದರು.

ರಾಜಕೀಯ ಮುಖಂಡರ ಜತೆಗಿನ ಮಾತುಕತೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

‌ಕಳೆದ ತಿಂಗಳು ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿದ್ದ ಸೂಪರ್ ಸ್ಟಾರ್‌ ‘ಯುದ್ಧಕ್ಕೆ ಸಿದ್ಧರಾಗಿ’ ಎಂದು ಹೇಳುವ ಮೂಲಕ, ರಾಜಕೀಯ ಪ್ರವೇಶ ಸಾಧ್ಯತೆಯನ್ನು ಪರಿಶೀಲಿಸುವ ಸುಳಿವು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT