ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಘರ್ಷಣೆ ತನಿಖೆಗೆ ವಿಶೇಷ ತಂಡ

Last Updated 23 ಜೂನ್ 2017, 10:30 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಮತ್ತು ವಿಟ್ಲದಲ್ಲಿ ನಡೆದಿರುವ ಕೋಮು ಘರ್ಷಣೆ ಪ್ರಕರಣಗಳ ತನಿಖೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಬುಧವಾರ ಬೆಂಜನಪದವು ಬಳಿ ನಡೆದ ಎಸ್‌ಡಿಪಿಐ ಕಾರ್ಯಕರ್ತನ ಕೊಲೆ ಪ್ರಕರಣದ ತನಿಖೆಗೆ ನಾಲ್ಕು ತಂಡಗಳನ್ನು ರಚಿಸ ಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕುರಿತು ಪರಿಸ್ಥಿತಿ ಅವಲೋಕಿಸಲು ಗುರುವಾರ ಬಂದಿದ್ದ ಅವರು ನಗರ ಪೊಲೀಸ್ ಕಮಿಷನರ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ, ‘ಗಲಭೆ, ಚೂರಿ ಇರಿತ ಮತ್ತು ಕೊಲೆ ಪ್ರಕರಣಗಳಲ್ಲಿ ಭಾಗಿಯಾ ಗಿರುವ ಎಲ್ಲ ಆರೋಪಿಗಳನ್ನೂ ಬಂಧಿಸ ಲಾಗುವುದು. ಹಿನ್ನೆಲೆಯಲ್ಲಿ ನಿಂತು ಗಲಭೆಗೆ ಪ್ರಚೋದಿಸುವ ಎಲ್ಲ ವ್ಯಕ್ತಿಗ ಳನ್ನೂ ಬಂಧಿಸಲು ಕ್ರಮ ಕೈಗೊಳ್ಳಲಾ ಗುವುದು’ ಎಂದು ಹೇಳಿದರು.

‘ರಾಜ್ಯ ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್‌ ಮತ್ತು ಜಿಲ್ಲೆಯ ಎಸ್‌ಪಿ ಸಿ.ಎಚ್‌.ಸುಧೀರ್‌ ಕುಮಾರ್‌ ರೆಡ್ಡಿ ಬಂಟ್ವಾಳದಲ್ಲೇ ಮೊಕ್ಕಾಂ ಹೂಡಿ, ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದ ಕೆಲಸ ಮಾಡ ಲಿದ್ದಾರೆ. ಗಲಭೆ ಪ್ರಕರಣಗಳು ಮರು ಕಳಿಸದಂತೆ ಪೊಲೀಸ್‌ ಇಲಾಖೆ ಎಚ್ಚರಿಕೆ ವಹಿಸಲಿದೆ’ ಎಂದರು.

ಎಸ್‌ಡಿಪಿಐ ಕಾರ್ಯಕರ್ತ ಅಶ್ರಫ್‌ ಕೊಲೆ ಮಾಡಿರುವ ಆರೋಪಿಗಳ ಕುರಿತು ಪೊಲೀಸರಿಗೆ ಸುಳಿವು ಲಭ್ಯವಾಗಿದೆ. ಶೀಘ್ರದಲ್ಲಿಯೇ ಎಲ್ಲ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಿಲ್ಲೆಯಲ್ಲಿ ಮತ್ತೆ ಅಹಿತಕರ ಘಟನೆಗಳು ನಡೆಯುವುದನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಜೂನ್‌ 27ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ರೌಡಿಗಳು ಮತ್ತು ಮತೀಯ ಗಲಭೆಕೋರರ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸ ಲಾಗಿದೆ. ಉಡುಪಿ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿರುವ ಪೊಲೀಸರನ್ನು ಬಂಟ್ವಾಳ ತಾಲ್ಲೂಕಿನಾದ್ಯಂತ ನಿಯೋಜನೆ ಮಾಡಲಾಗಿದೆ ಎಂದರು.

ವಿಚಾರಣೆಗೆ ಆದೇಶ: ಈ ಪ್ರಕರಣ ಗಳಲ್ಲಿ ಪೊಲೀಸರ ವೈಫಲ್ಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಡಿಜಿಪಿ, ‘ಕಲ್ಲಡ್ಕದಲ್ಲಿ ಪೊಲೀಸರ ವೈಫಲ್ಯದಿಂದಾಗಿಯೇ ಕೋಮು ಗಲಭೆ ನಡೆದಿದೆ ಎಂಬ ಆರೋಪದ ಕುರಿತು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಐಜಿಪಿಯವರಿಗೆ ಆದೇಶಿಸಲಾಗಿದೆ. ಅವರು ಶೀಘ್ರದಲ್ಲಿ ವರದಿ ಸಲ್ಲಿಸಲಿದ್ದಾರೆ.

ಪೊಲೀಸರು ತಪ್ಪೆಸಗಿರುವುದು ಸಾಬೀತಾ ದರೆ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಪ್ರಕರ ಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್‌ಪಿ ಡಾ.ಸಿ.ಬಿ. ವೇದ ಮೂರ್ತಿ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಇಂತಹ ಘಟನೆಗಳು ನಡೆದಾಗ ಪೊಲೀಸರು ಎಚ್ಚರಿಕೆ ಯಿಂದ ಇರಬೇಕು ಮತ್ತು ತಕ್ಷಣವೇ ಕ್ರಮ ಜರುಗಿಸಬೇಕು’ ಎಂದು ಹೇಳಿದರು.

ಜಿಲ್ಲೆಯಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸಲು ತೀರ್ಮಾನಿಸಲಾಗಿದೆ. ಜಿಲ್ಲೆಯಲ್ಲಿ ಸಮಾಜಘಾತುಕ ಚಟುವಟಿಕೆ ನಡೆಸುವವರು ಮತ್ತು ರೌಡಿಗಳನ್ನು ನಿಯಂತ್ರಣದಲ್ಲಿ ಇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ ಎಂದು ಹೇಳಿದರು.

ಆಶ್ರಫ್ ಅಂತ್ಯಕ್ರಿಯೆ 
ಬಂಟ್ವಾಳ: ತಾಲ್ಲೂಕಿನ ಬೆಂಜನ ಪದವು ಸಮೀಪದ ರಾಮನಗರ ಎಂಬಲ್ಲಿ ಬುಧವಾರ ಬೆಳಿಗ್ಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಮ್ಮುಂಜೆ ಎಸ್‌ಡಿಪಿಐ ವಲಯಾ ಧ್ಯಕ್ಷ ಮುಹಮ್ಮದ್ ಆಶ್ರಫ್ ಇವರ ಅಂತ್ಯಕ್ರಿಯೆ ಇಲ್ಲಿನ ಕಲಾಯಿ ಜುಮ್ಮಾ ಮಸೀದಿ ದಫನ ಭೂಮಿ ಯಲ್ಲಿ ಬುಧವಾರ ರಾತ್ರಿ 11 ಗಂಟೆಗೆ ನೆರವೇರಿತು.

ಮೃತದೇಹವನ್ನು ಅಡ್ಯಾರ್ ಸಮೀಪದ ಕಣ್ಣೂರು ಕೇಂದ್ರ ಜುಮ್ಮಾ ಮಸೀದಿಗೆ ಬುಧವಾರ ಸಂಜೆ 6 ಗಂಟೆಗೆ ತಂದು ಆಂಬು ಲೆನ್ಸ್ನಲ್ಲಿ ಸಾರ್ವಜನಿಕರ ವೀಕ್ಷಣೆಗೆ ಇಡಲಾಯಿತು. ಕಲಾಯಿ ಮಸೀದಿಗೆ ತಂದು ಸಾರ್ವಜನಿಕರ ವೀಕ್ಷಣೆಗೆ ಇಟ್ಟು ಬಳಿಕ ರಾತ್ರಿ  ಅಂತ್ಯಕ್ರಿಯೆ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT