ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 3ಕ್ಕೆ ವಿಶ್ವ ಕನ್ನಡ ಸಮ್ಮೇಳನದ ದಿನಾಂಕ ನಿಗದಿ

Last Updated 24 ಜೂನ್ 2017, 4:36 IST
ಅಕ್ಷರ ಗಾತ್ರ

ದಾವಣಗೆರೆ: ಮೂರನೇ ವಿಶ್ವ ಕನ್ನಡ ಸಮ್ಮೇಳನದ ದಿನಾಂಕವನ್ನು ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಯಲಿರುವ ಸಭೆಯಲ್ಲಿ ನಿಗದಿಪಡಿಸಲಾಗುವುದು ಎಂದು ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ ತಿಳಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದೇ ನವೆಂಬರ್‌ನಲ್ಲಿ ಸಮ್ಮೇಳನ ನಿಗದಿಯಾಗಿದೆ. ಆದರೆ, ದಿನಾಂಕವನ್ನು ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಹೇಳಿದರು. 

ಸಮ್ಮೇಳನಕ್ಕೆ ಅಗತ್ಯವಾಗಿರುವ ಮೂಲ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಈಗಿನಿಂದಲೇ ಕಾರ್ಯೋನ್ಮುಖರಾಗಬೇಕು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಮ್ಮೇಳನಕ್ಕೆ ಬರುವವರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ವಿವರವಾದ ವರದಿ ತರಿಸಲಾಗಿದೆ ಎಂದು ಸಭೆಗೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌ ಮಾಹಿತಿ ನೀಡಿದರು.

ಸಮ್ಮೇಳನ ಯಾವ ರೀತಿಯಲ್ಲಿರಬೇಕೆಂಬ ಬಗ್ಗೆ ಪೂರ್ವಭಾವಿಯಾಗಿ ವರದಿ ರೂಪಿಸಿರುವುದಾಗಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.

ಸಭೆಯಲ್ಲಿ ಸಮ್ಮೇಳನದ ವಿಶೇಷಾಧಿಕಾರಿ ಲಕ್ಷ್ಮಿನಾರಾಯಣ, ಜಿಲ್ಲಾ ಪಂಚಾಯ್ತಿ ಸಿಇಒ ಎಸ್‌.ಅಶ್ವತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮಂಜುನಾಥ ಕುರ್ಕಿ, ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಾಮದೇವಪ್ಪ, ಪ್ರೊ.ಸಿ.ಎಚ್.ಮುರಿಗೇಂದ್ರಪ್ಪ, ಬಾ.ಮ.
ಬಸವರಾಜಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ, ವಾರ್ತಾ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT