ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರಿ ಆಸ್ಪತ್ರೆಗಳನ್ನು ಉದ್ಧಾರ ಮಾಡಲಿ’

Last Updated 24 ಜೂನ್ 2017, 19:57 IST
ಅಕ್ಷರ ಗಾತ್ರ

ಹೊಸಕೋಟೆ: ‘ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ –2017  ಜಾರಿಗೆ ತರಲು ಉದ್ದೇಶಿಸಿದ್ದು, ಇದು ಬಹಳಷ್ಟು ವೈದ್ಯರಿಗೆ ಮಾರಕವಾಗಲಿದೆ’ ಎಂದು ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು. ವಿವಾ ಹೆಲ್ತ್ ಕೇರ್ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಆ ಸರ್ಕಾರ ಬಗ್ಗೆ ನಿರ್ಲಕ್ಷ್ಯವಹಿಸಿದೆ. ಸರ್ಕಾರಿ ಆಸ್ಪತ್ರೆಗಳನ್ನು ಉದ್ಧಾರ ಮಾಡುವುದನ್ನು ಬಿಟ್ಟು ಖಾಸಗಿ ಆಸ್ಪತ್ರೆಗಳ ವಿರುದ್ಧ ಕಾನೂನು ತರುವುದು ಸರಿಯಲ್ಲ’ ಎಂದರು.

ವಿವಾ ಸಂಸ್ಥೆ ನಿರ್ದೇಶಕ ಡಾ.ಸೈಯದ್ ಮುಜಾಮಿಲ್, ‘ಆಸ್ಪತ್ರೆಗಳಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ತೀವ್ರವಾಗಿದೆ. ಅದನ್ನು ನೀಗಿಸಲು ವಿವಾ ಸಂಸ್ಥೆಯಿಂದ  ಉದ್ಯೋಗ ಅವಕಾಶಗಳಿಗಾಗಿ ಈ ತರಬೇತಿ ಕೇಂದ್ರ ಆರಂಭಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT