ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರಪತಿ ಚುನಾವಣೆ; ಕೋವಿಂದ್ ಗೆಲುವು ನಿಚ್ಚಳ

Last Updated 25 ಜೂನ್ 2017, 19:48 IST
ಅಕ್ಷರ ಗಾತ್ರ

ನವದೆಹಲಿ: ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎಯ ಅಭ್ಯರ್ಥಿ ರಾಮನಾಥ ಕೋವಿಂದ್ ಶೇ 62ರಷ್ಟು ಮತಗಳನ್ನು ಪಡೆದು, ಗೆಲುವು ಸಾಧಿಸುವುದು ನಿಚ್ಚಳವಾಗಿದೆ.

ಯುಪಿಎ ಮತ್ತು ಇತರ ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾ ಕುಮಾರ್ ಅವರು ಶೇ 34ರಷ್ಟು ಮತಗಳನ್ನು ಪಡೆಯುವ ಸಾಧ್ಯತೆ ಇದೆ. ಅವರು ಇದೇ 28ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಮೀರಾಕುಮಾರ್‌ ನಾಮಪತ್ರ: ಸಿದ್ದರಾಮಯ್ಯ ದೇವೇಗೌಡ ಸಹಿ
ಬೆಂಗಳೂರು:
ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕಾಂಗ್ರೆಸ್‌ನ ಮೀರಾ ಕುಮಾರ್  ನಾಮಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಸೂಚಕರಾಗಿ ಸಹಿ ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ರಾಜ್ಯದಲ್ಲಿನ ಮತಗಳ ಕ್ರೋಡೀಕರಣದ ಜವಾಬ್ದಾರಿಯನ್ನು ಹೈಕಮಾಂಡ್‌ ವಹಿಸಿದೆ. ಹಾಗಾಗಿ ಅವರು ದೇವೇಗೌಡರ ನಿವಾಸಕ್ಕೆ ತೆರಳಿ, ಸೂಚಕರಾಗಿ ಅವರ ಸಹಿ ಪಡೆದರು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳಾದ ಮಾಣಿಕ್ಯಂ ಠಾಗೋರ್, ಸೂರಜ್‌ ಹೆಗಡೆ ಅವರು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅವರ ಸಹಿ ಪಡೆದರು.

ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ನಮ್ಮ ಪಕ್ಷ ಬೆಂಬಲ ನೀಡಲಿದ್ದು, ಕೆಲವು ಶಾಸಕರು ನಾಮ ಪತ್ರಕ್ಕ ಸಹಿ ಹಾಕಿದ್ದಾರೆ ಎಂದು ಕುಮಾರ ಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT