ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 3ಕ್ಕೆ ರಕ್ಷಿತ್‌ ಶೆಟ್ಟಿ– ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ

Last Updated 26 ಜೂನ್ 2017, 15:45 IST
ಅಕ್ಷರ ಗಾತ್ರ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಜುಲೈ 3ರಂದು ನಡೆಯಲಿದೆ.

ಇತ್ತೀಚೆಗೆ ತೆರೆಕಂಡ ಕಿರಿಕ್‌ ಪಾರ್ಟಿ ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ನಟಿಸಿದ್ದರು. ಈ ಚಿತ್ರದಲ್ಲಿ ಕರ್ಣ ಮತ್ತು ಸಾನ್ವಿ ಪಾತ್ರದಲ್ಲಿ ಮಿಂಚಿದ್ದ ಈ ಜೋಡಿ ಸಿನಿ ಪ್ರಿಯರ ಮನ ಗೆದಿತ್ತು.

ನಂತರದ ದಿನಗಳಲ್ಲಿ ರಕ್ಷಿತ್‌ ಶೆಟ್ಟಿ ಮತ್ತು ರಶ್ಮಿಕಾ ನಡುವೆ ಪ್ರೇಮಾಂಕುರವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಈ ಜೋಡಿ ಜುಲೈ 3ರಂದು ನಿಶ್ಚಿತಾರ್ಥ ಮಾಡಿಕೊಳ್ಳುವುದು ಖಚಿತವಾಗಿದೆ.

ಜುಲೈ 3ರಂದು ವಿರಾಜ್‌ಪೇಟೆಯಲ್ಲಿ ನಿಶ್ಚಿತಾರ್ಥ ನಡೆಯಲಿದ್ದು, ಎರಡು ಕುಟುಂಬದ ಸದಸ್ಯರು ಹಾಗೂ ಸ್ನೇಹಿತರು ಸೆರೆನಿಟಿ ಹಾಲ್‌ನಲ್ಲಿ ಸಂಜೆ 6.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT