ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೂಲ ಕಾಂಗ್ರೆಸ್ ಮೂಲೆಗುಂಪು’

ಸೂಕ್ತ ಸ್ಥಾನ ಸಿಗದ, ಕಮಲ ಕೈಹಿಡಿದ ಕಾಂಗ್ರೆಸ್ ಜಿಲ್ಲಾ ಖಜಾಂಚಿ ಎ.ವಿ. ನಾರಾಯಣಸ್ವಾಮಿ
Last Updated 27 ಜೂನ್ 2017, 7:39 IST
ಅಕ್ಷರ ಗಾತ್ರ

ದೇವನಹಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ಮೂಲೆಗುಂಪು ಮಾಡುತ್ತಿರುವುದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಜೆಪಿ ವಿಭಾಗೀಯ  ಉಸ್ತುವಾರಿ ಹಾಗೂ ಯಲಹಂಕ ಶಾಸಕ ವಿಶ್ವನಾಥ ತಿಳಿಸಿದರು.

ದೇವನಹಳ್ಳಿ ತಾಲ್ಲೂಕು ಅನಂತ ವಿದ್ಯಾನಿಕೇತನ ಶಾಲಾ ಆವರಣದಲ್ಲಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಖಜಾಂಚಿ ಎ.ವಿ. ನಾರಾಯಣಸ್ವಾಮಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ ಕುರಿತು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಆನೇಕ ವರ್ಷಗಳಿಂದ ದುಡಿದವರೆಗೆ ಗೌರವವಿಲ್ಲ ಎಂಬುದನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಮಾಜಿ ಸಂಸದ ವಿಶ್ವನಾಥ್, ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ ಬಿಜೆಪಿಗೆ ಸೇರ್ಪಡೆಗೊಳ್ಳವ ಮೂಲಕ ಕಾಂಗ್ರೆಸ್‌ನಲ್ಲಿ ಯಾವ ರೀತಿ ಎಂದು ಅವರೆ ಹೇಳಿದ್ದಾರೆ. ಸ್ಥಳೀಯ ಮುಖಂಡ ಎ.ವಿ. ನಾರಾಯಣಸ್ವಾಮಿ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದ್ದಾರೆ, ಅವರಿಗೆ ಸೂಕ್ತ ಸ್ಥಾನ ಮಾನ ನೀಡದಿದ್ದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸೇರ್ಪಡೆಗೊಂಡು ಮಾತನಾಡುತ್ತಲೇ ಗದ್ಗದಿತರಾದ ಎ.ವಿ.ನಾರಾಯಣಸ್ವಾಮಿ, ‘ನನ್ನ  ರಾಜಕೀಯ ಜೀವನದಲ್ಲಿ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿರುವೆ. ಈವರೆಗೂ ಯಾವುದೆ ಹುದ್ದೆ ಪಡೆಯಲು ಲಾಭಿ ನಡೆಸಿಲ್ಲ. ಸೌಜನ್ಯಕ್ಕಾದರೂ ಸಭೆ ಸಮಾರಂಭಕ್ಕೆ ಆಹ್ವಾನಿಸುತ್ತಿರಲಿಲ್ಲ’ ಎಂದರು.

ಬಿಜೆಪಿ ರಾಜ್ಯ ಎಸ್ಸಿ ಮೊರ್ಚಾ ಕಾರ್ಯದರ್ಶಿ ಕೆ.ನಾಗೇಶ್ ಮಾತನಾಡಿದರು. ಬಿಜೆಪಿ ರಾಷ್ಟ್ರೀಯ ಪರಿಷದ್ ಸದಸ್ಯ ಗುರುಸ್ವಾಮಿ, ರಾಜ್ಯ  ಪರಿಷತ್ ಸದಸ್ಯ  ದೇ.ಸು ನಾಗರಾಜ್, ಜಿಲ್ಲಾ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ರಾಜ್ ಗೊಪಾಲ್, ಎಸ್ಟಿ ಮೊರ್ಚಾ ಅಧ್ಯಕ್ಷ ತಮ್ಮಯ್ಯ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್, ತಾಲ್ಲೂಕು ಅಧ್ಯಕ್ಷ ನಾಗರಾಜ್‌ಗೌಡ, ಎಸ್ಸಿ ಮೊರ್ಚಾ ಅಧ್ಯಕ್ಷ ಎಂ.ಶ್ರೀನಿವಾಸ್, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್, ಸೋಣ್ಣೇಗೌಡ, ಕೇಶವ ತಾಲ್ಲೂಕು ಉಪಾಧ್ಯಕ್ಷ ಕೆ.ಸಿ.ಮುನಿರಾಜು, ಮಡಿವಾಳ ಸಂಘ ರಾಜ್ಯಾಧ್ಯಕ್ಷ  ನಂಜಪ್ಪ, ಹಾಪ್‌ಕಾಮ್ ನಿರ್ದೇಶಕ ಶ್ರೀನಿವಾಸ್, ಕೆಂಪೇಗೌಡ, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಡಿ.ಆರ್ ನಾರಾಯಣಸ್ವಾಮಿ ಇದ್ದರು.

**

‘ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ’
ಬಿಜೆಪಿ ಮುಖಂಡ ಬಚ್ಚೇಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂಬುದನ್ನು ಅರಿತು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ಉತ್ತಮ ಯೋಜನೆಗಳು ಮೆಚ್ಚಿ  ಬೇರೆ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಇದರಿಂದ ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿಗೆ ಆನೆ ಬಲ ಬಂದಿದೆ, ಕೇಂದ್ರ ಸರ್ಕಾರ 54 ವಿನೂತನ ಅಭಿವೃದ್ಧಿ ಯೋಜನೆ ಜಾರಿಗೊಳಿಸಿದೆ ಆಡಳಿತ ಪಕ್ಷಕ್ಕೆ ಕಾಳಜಿ ಇಲ್ಲ ಎಂದರು.

**

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೊನೆಯ ಆಡಳಿತ ನಡೆಸುತ್ತಿದ್ದು ಬಿಜೆಪಿ ಆಡಳಿತಕ್ಕೆ ಬಂದು ಅಂತ್ಯ ಕಾಣಿಸಲಿದೆ, ಮೂಲ ಹಾಗೂ ಹಿರಿಯ ಕಾಂಗ್ರೆಸ್ಸಿಗರಿಗೆ ಭವಿಷ್ಯ ಇಲ್ಲವಾಗಿದೆ.
-ಬಿ.ರಾಜಣ್ಣ , ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT