ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ಜಯಂತಿ ಸಂಭ್ರಮ

Last Updated 28 ಜೂನ್ 2017, 10:43 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ತಾಲೂಕಿನ ವಿವಿಧೆಡೆಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಕೇಂದ್ರ ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ತಾ.ಪಂ ಅಧ್ಯಕ್ಷ ಶ್ರೀವತ್ಸ, ನಗರಸಭೆ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಉಪಾಧ್ಯಕ್ಷೆ ಜಯಲಕ್ಷ್ಮೀ, ಜಿ.ಪಂ ಸದಸ್ಯೆ ಪದ್ಮಾವತಿ ಮುನೇಗೌಡ, ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಎನ್.ಹನುಮಂತೇಗೌಡ, ಬಮೂಲ್ ಅಧ್ಯಕ್ಷ ಎಚ್.ಅಪ್ಪಯ್ಯಣ್ಣ, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಡಿ. ಸತ್ಯನಾರಾಯಣಗೌಡ, ಜಿ.ಪಂ. ಸದಸ್ಯ ಜಿ.ಚುಂಚೇಗೌಡ, ತಹಶೀಲ್ದಾರ್ ಬಿ.ಎ. ಮೋಹನ್, ಬಿಇಓ ಹನುಮಂತಪ್ಪ ಮತ್ತಿತರರು ಭಾಗವಹಿಸಿದ್ದರು. 

ಜೆಡಿಎಸ್ ವತಿಯಿಂದ: ನಗರದ ಜೆಡಿಎಸ್ ವತಿಯಿಂದ ನಡೆದ ಕೆಂಪೇಗೌಡರ ಜಯಂತಿಆಚರಿಸಲಾಯಿತು. ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಜೆಡಿಎಸ್ ಮುಖಂಡರು, ಕೆಂಪೇಗೌಡರ ಸಾಧನೆ ಪರಿಶ್ರಮಗಳನ್ನು ಸ್ಮರಿಸಿದರು. ಜೆಡಿಎಸ್ ತಾ.ಅಧ್ಯಕ್ಷ ಡಾ.ಎಚ್.ಜಿ. ವಿಜಯ ಕುಮಾರ್ ಮಾತನಾಡಿದರು.

ಬಮೂಲ್ ಅಧ್ಯಕ್ಷ ಎಚ್.ಅಪ್ಪಯ್ಯಣ್ಣ, ಪಿಎಲ್‌ಡಿ  ಬ್ಯಾಂಕ್ ಉಪಾಧ್ಯಕ್ಷ ಪುಟ್ಟ ಬಸವರಾಜು, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲೇಶ್, ಸದಸ್ಯರಾದ ಟಿ.ಎನ್. ಪ್ರಭುದೇವ್, ಸುಶೀಲಾ ರಾಘವ, ಜಿ.ಪಂ ಮಾಜಿ ಸದಸ್ಯ ನರಸಿಂಹಯ್ಯ, ಎಪಿಎಂಸಿ ನಿರ್ದೇಶಕ ಲಕ್ಷ್ಮೀನಾರಾಯಣ್, ತಾ.ಪಂ ಮಾಜಿ ಉಪಾಧ್ಯಕ್ಷ ದೇನಹಳ್ಳಿ ಮುನಿಯಪ್ಪ, ಮುಖಂಡರಾದ ಪದ್ಮನಾಭ್, ವೆಂಕಟಪ್ಪ, ಕುಂಟನಹಳ್ಳಿ ಮಂಜುನಾಥ್ ಭಾಗವಹಿಸಿದ್ದರು.

ನಗರಸಭೆ: ಜಯಂತಿಯಲ್ಲಿ ನಗರಸಭೆ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಉಪಾಧ್ಯಕ್ಷೆ ಜಯಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲೇಶ್, ಪೌರಾಯುಕ್ತ ಡಾ.ಪಿ.ಬಿಳಿಕೆಂಚಪ್ಪ ಸೇರಿದಂತೆ ನಗರಸಭೆ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

ಎಸ್.ಜೆ.ಸಿ.ಆರ್. ವಿದ್ಯಾನಿಕೇತನ : ತಾಲೂಕಿನ ಮೆಳೇಕೋಟೆ ಕ್ರಾಸ್ ಎಸ್.ಜೆ.ಸಿ.ಆರ್. ವಿದ್ಯಾನಿಕೇತನ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ’ ಆಚರಿಸಲಾಯಿತು.  ಮುಖ್ಯ ಅತಿಥಿಗಳಾಗಿ ಹಿರಿಯ ಸಂಶೋಧಕ ಡಾ. ದೇವರಕೊಂಡಾರೆಡ್ಡಿ ಭಾಗವಹಿಸಿದ್ದರು. ಶಾಲೆಯ ವತಿಯಿಂದ ದೇವರಕೊಂಡಾರೆಡ್ಡಿ ಅವರನ್ನು ಗೌರವಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯ  ಎಸ್. ವೆಂಕಟೇಶಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT