ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಮಸೂದೆ: ಗುತ್ತಿಗೆದಾರರಿಗೆ ಅನುಕೂಲ

Last Updated 1 ಜುಲೈ 2017, 8:35 IST
ಅಕ್ಷರ ಗಾತ್ರ

ಚಾಮರಾಜನಗರ: ಸರ್ಕಾರಿ ಯೋಜನೆ ಗಳ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಗುತ್ತಿಗೆದಾರರಿಗೆ ಶೇ. 24.1ರಷ್ಟು ಮೀಸಲಾತಿ ನೀಡುವ ಮಸೂದೆಯಿಂದ ಇಡೀ ದೇಶದ ಗುತ್ತಿಗೆ ದಾರರಿಗೆ ಅನುಕೂಲವಾಗಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಎಸ್. ಮಾದಯ್ಯ ಹೇಳಿದರು.

ನಗರದ ರಾಮಚಂದ್ರ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ವಿಧಾನಸಭೆಯ ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗೆ ಸಹಿ ಹಾಕಲು ರಾಜ್ಯಪಾಲರು ಒಪ್ಪಿರಲಿಲ್ಲ. ಒಂದು ವೇಳೆ ಅವರು ಸಹಿ ಹಾಕಿದ್ದರೆ, ಮಸೂದೆ ರಾಜ್ಯಕ್ಕೆ ಸೀಮಿತವಾಗಿರುತ್ತಿತ್ತು. ರಾಜ್ಯಪಾಲರು ಅದನ್ನು ರಾಷ್ಟ್ರಪತಿ ಅವರಿಗೆ ರವಾನಿಸಿದ್ದರು. ಈಗ ರಾಷ್ಟ್ರಪತಿ ಅವರು ಅದಕ್ಕೆ ಅನು ಮೋದನೆ ನೀಡಿರುವುದರಿಂದ ಕೇಂದ್ರ ಮಟ್ಟದಲ್ಲಿ ಮಸೂದೆ ಜಾರಿಯಾದಂತಾ ಗಿದೆ ಎಂದು ಹೇಳಿದರು.

ರಾಜ್ಯ ಸಂಘವು ನಿರಂತರ ಹೋರಾ ಟದ ಮೂಲಕ ಮಸೂದೆ ಜಾರಿಯಾ ಗಲು ಶ್ರಮವಹಿಸಿದೆ. ರಾಜ್ಯ ಸಂಘವನ್ನು ಬಲಗೊಳಿಸುವ ಜತೆಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಂಘ ಗಳನ್ನು ರಚಿಸಿ ಒಗ್ಗಟ್ಟು ಪ್ರದರ್ಶನ ಮಾಡ ಬೇಕು. ಸಣ್ಣಪುಟ್ಟ ಗೊಂದಲಗಳನ್ನು ನಿವಾರಿಸಿ, ಸಮನ್ವಯ ಸಾಧಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಸಂಘದ ಗೌರವ ಅಧ್ಯಕ್ಷ ಅಯ್ಯನ ಪುರ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಗಲವಾಡಿ ಚಂದ್ರು, ತಾಲ್ಲೂಕು ಅಧ್ಯಕ್ಷರಾದ ಸಿ.ಕೆ. ಮಂಜು ನಾಥ್, ಜಗದೀಶ್, ಸಿದ್ದಯ್ಯ, ಪದಾಧಿ ಕಾರಿಗಳಾದ  ಸಿ.ಎಸ್.ಮಹದೇವ ನಾಯಕ, ಚನ್ನಪ್ಪ, ಕೆ.ನಾಗರಾಜು, ಪುಟ್ಟ ಸ್ವಾಮಿ, ನಟರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT