ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲ ಮೇಲೆ ಹಲ್ಲೆ: ಖಂಡನೆ

Last Updated 8 ಜುಲೈ 2017, 6:03 IST
ಅಕ್ಷರ ಗಾತ್ರ

ಯಾದಗಿರಿ: ನ್ಯಾಯಾಲಯ ವಿಚಾರಣೆ ಕಲಾಪದ ಸಂದರ್ಭದಲ್ಲಿ ಅತ್ಯಾಚಾರ ಸಂತ್ರಸ್ತ ಯುವತಿಗೆ ಅನಗತ್ಯ ಪ್ರಶ್ನೆ ಕೇಳಿದರು ಎಂಬ ಕಾರಣಕ್ಕೆ ಯುವತಿಯ ತಂದೆ ಗುರುವಾರ ವಕೀಲರ ಮೇಲೆ ಹಲ್ಲೆ ನಡೆಸಿದ್ದಾರೆ.

ಯಾದಗಿರಿ ತಾಲ್ಲೂಕಿನ ವ್ಯಕ್ತಿಯೊಬ್ಬರ ಪುತ್ರಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯದಲ್ಲಿ ಗುರುವಾರ ವಿಚಾರಣೆ ನಡೆದಿತ್ತು. ವಿಚಾರಣೆ ಮುಗಿಯುತ್ತಿದ್ದಂತೆ  ನ್ಯಾಯಾ ಲಯದ ಆವರಣದಲ್ಲಿ  ಹಲ್ಲೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿ ಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಕೀಲರ ಮೇಲೆ ಹಲ್ಲೆ ಮಾಡಿದ ಕಕ್ಷಿದಾರರು ಮತ್ತು ಆಕೆಯ ತಾಯಿ ಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಭೀಮರಾಯ ಕಿಲ್ಲನಕೇರಾ ನೇತೃತ್ವದಲ್ಲಿ ವಕೀಲರು ಶುಕ್ರವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಅವರಿಗೆ ಮನವಿ ಸಲ್ಲಿಸಿದರು.

ಮಹಿಪಾಲರೆಡ್ಡಿ ಇಟಗಿ, ಸಿ.ಎಸ್. ಮಾಲಿಪಾಟೀಲ್, ನಿರಂಜನ ಯರ ಗೋಳ, ದೇವಿಂದ್ರ ದೊಡ್ಮನಿ, ನಾಗ ಭೂಷಣ ಆಡಕಿ, ರಾಜು ದೊಡ್ಮನಿ, ಕೆ. ತಿರುಪತಿ ಹಾಗೂ ತಾಲ್ಲೂಕುವಕೀಲರ ಸಂಘದ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಗಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT