ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಸ್ತೆ ಅಭಿವೃದ್ಧಿಗೆ ₹ 70 ಕೋಟಿ ಅನುದಾನ’

Last Updated 8 ಜುಲೈ 2017, 6:04 IST
ಅಕ್ಷರ ಗಾತ್ರ

ಗುರುಮಠಕಲ್: ‘ಮತ ಕ್ಷೇತ್ರದಾದ್ಯಂತ ಹಲವಾರು ಯೋಜನೆಗಳು ಅನುಷ್ಠಾನ ಗೊಳ್ಳುತ್ತಿವೆ. ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗು ತ್ತಿದೆ’ ಎಂದು ಕರ್ನಾಟಕ ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು.

ಪಟ್ಟಣದ ಪುರಸಭೆ ಆವರಣದಲ್ಲಿ  ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಚೆಕ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

‘ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ, ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆಗಾಗಿ ₹ 70 ಕೋಟಿ ಅನುದಾನ ಮೀಸಲಿಡಲಾಗಿದ್ದು, ಒಟ್ಟು ₹ 164 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ಜರುಗುತ್ತಿವೆ. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಪ್ರಚಾರ ಮಾಡದ ಕಾರಣ ಸಾರ್ವಜನಿ ಕರಿಗೆ ಮಾಹಿತಿ ಸಿಗುತ್ತಿಲ್ಲ’ ಎಂದರು.

ಪುರಸಭೆ ಅಧ್ಯಕ್ಷ ರವೀಂದ್ರರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರೇಣುಕಾ ಚಂದಾಪೂರ, ಮಾಜಿ ಉಪಾಧ್ಯಕ್ಷರಾದ ಪ್ರಕಾಶ ನಿರೇಟಿ, ವಿಜಯಲಕ್ಷ್ಮೀ ಕೋಟಕೊಂಡಿ, ಮುಖ್ಯಾಧಿಕಾರಿ ರವೀಂದ್ರ ಲಂಬು, ತಾಲ್ಲೂಕು ಪಂಚಾಯಿತಿ ಸದಸ್ಯ ತಿಪ್ಪಣ್ಣ ಗುಟ್ಟಲ್, ಎಪಿಎಂಸಿ ಸದಸ್ಯ ಅನಂತಪ್ಪ ಬೋಯಿನ್, ಅನ್ನಭಾಗ್ಯ ಸಮಿತಿ ನಿರ್ದೇಶಕ ಬಸಣ್ಣ ದೇವರಳ್ಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ, ಉದ್ಯಮಿ ನರೇಂದ್ರ ರಾಠೋಡ್, ಪುರಸಭೆ ಸದಸ್ಯರು, ಸಿಬ್ಬಂದಿ ಇದ್ದರು.

2015–16ನೇ ಸಾಲಿನ ಎಸ್ಎಫ್‌ಸಿ ವಿಶೇಷ ಅನುದಾನದಲ್ಲಿ ಸಿಸಿ ರಸ್ತೆ, ಚರಂಡಿಗಳ ನಿರ್ಮಾಣ ಮತ್ತು ಪುರಸಭೆ ಸಭಾಭವನದ ಉನ್ನತೀಕರಣ ಕಾಮ ಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸ ಲಾಯಿತು. 2016-17ನೇ ಸಾಲಿನ ಎಸ್‌ಸಿಪಿ ಯೋಜನೆಯಡಿ  ಮನೆ ನಿರ್ಮಿಸುವ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಚೆಕ್ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT