ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೇಂದ್ರದಿಂದ ತಾರತಮ್ಯ: ಆರೋಪ’

ಕೆಂಭಾವಿ ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ
Last Updated 10 ಜುಲೈ 2017, 10:03 IST
ಅಕ್ಷರ ಗಾತ್ರ

ಕೆಂಭಾವಿ: ‘ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಅಭಿವೃದ್ಧಿ  ಹಾಗೂ ಅನುದಾನ ಬಿಡುಗಡೆ ವಿಷಯದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು  ಎಐಸಿಸಿ ಕಾರ್ಯದರ್ಶಿ ಡಾ.ಸಾಕೆ ಶೈಲಜನಾಥ ಗಂಭೀರ ಆರೋಪ ಮಾಡಿದರು.

ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಯುಪಿಎ ಸರ್ಕಾರ ಘೋಷಿಸಿದ್ದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅಭಿವೃದ್ಧಿ ಹೆಸರಲ್ಲಿ ಕೇಂದ್ರ ಸರ್ಕಾರ ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಬೂತ್‌ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಹಂತಹಂತವಾಗಿ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದು ಹೇಳಿದರು.

ಪಕ್ಷದ ಜಿಲ್ಲಾ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಕೆ.ವಿ.ಗೌತಮ ಮಾತನಾಡಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಸೂಚನೆ ಮೇರೆಗೆ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು. ರಾಜ್ಯ ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದವರೆಗೂ ತಲುಪಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ ಎಂದರು.

ಮಾಜಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ನಾಲ್ಕು ವರ್ಷಗಳಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ  ಎಂದು ಅವರು  ಹೇಳಿದರು.

ಕೆಂಭಾವಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗನಗೌಡ ಮಾಲಿಪಾಟೀಲ, ಜಿ.ಪಂ ಅಧ್ಯಕ್ಷ ಬಸರೆಡ್ಡಿ ಅನಪೂರ, ಉಪಾಧ್ಯಕ್ಷೆ ಚಂದ್ರಕಲಾ ಹೊಸಮನಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಜಿ.ಪಂ ಸದಸ್ಯ ಬಸನಗೌಡ ಯಡಿಯಾಪೂರ, ಜಿ.ಪಂ ಮಾಜಿ ಅಧ್ಯಕ್ಷ ಸಿದ್ಧನಗೌಡ ಪೊಲೀಸ್ ಪಾಟೀಲ, ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವಾಮನರಾವ ದೇಶಪಾಂಡೆ ಇದ್ದರು. ಬಸನಗೌಡ ಚಿಂಚೋಳಿ ನಿರೂಪಿಸಿದರು. ಬಾಪುಗೌಡ ಪಾಟೀಲ ಯಾಳಗಿ ಸ್ವಾಗತಿಸಿದರು. ಗೌಡಪ್ಪಗೌಡ ನಂದರಗಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT