ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಿತಕರ ಘಟನೆಗಳಿಗೆ ಕಡಿವಾಣ ಅಗತ್ಯ

‘ಸುಧಾರಿತ ಗಸ್ತು ವ್ಯವಸ್ಥೆ’ ಮಾಸಾಚರಣೆ: ಗೋಕಾಕ್ ಡಿವೈಎಸ್‌ಪಿ ಇ.ಎಸ್. ವೀರಭದ್ರಪ್ಪ ಅಭಿಪ್ರಾಯ
Last Updated 10 ಜುಲೈ 2017, 11:15 IST
ಅಕ್ಷರ ಗಾತ್ರ

ಹುಕ್ಕೇರಿ: ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದಕ್ಕೆ ‘ಸುಧಾರಿತ ಗಸ್ತು ವ್ಯವಸ್ಥೆ’ ಪೂರಕವಾಗಿದೆ ಎಂದು  ಗೋಕಾಕ ಡಿವೈಎಸ್‌ಪಿ ಇ.ಎಸ್. ವೀರಭದ್ರಪ್ಪ ಹೇಳಿದರು.

ಪಟ್ಟಣದ ವಿಶ್ವರಾಜ್ ಭವನದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಏರ್ಪಡಿಸಿದ್ದ ಸುಧಾರಿತ ಗಸ್ತು ವ್ಯವಸ್ಥೆ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಹಾಗೂ ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಮಹಿಳೆ ಮತ್ತು ಮಕ್ಕಳ ರಕ್ಷಣೆ, ಶಾಂತಿ ಸುವ್ಯವಸ್ಥೆ ಕಾಪಾಡುವುದು ಸೇರಿದಂತೆ ಇಲಾಖೆ ಹಾಗೂ ಸಾರ್ವಜನಿಕರ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ದಿಸೆಯಲ್ಲಿ ಈ
ವ್ಯವಸ್ಥೆ ಪರಿಣಾಮಕಾರಿಯಾಗಿದೆ ಎಂದರು.

ಈ ಹಿಂದೆ ಪೊಲೀಸ್ ಇಲಾಖೆಗೆ ಯಾವುದೇ ಸೌಲಭ್ಯಗಳಿರಲಿಲ್ಲ. ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ಸಾಕಷ್ಟು ವಿಳಂಬವಾಗುತ್ತಿತ್ತು. ಆದರೆ, ಇದೀಗ ಹೊಸ ಹೊಸ ತಂತ್ರಜ್ಞಾನಗಳ ಆವಿಷ್ಕಾರವಾಗಿದ್ದು, ಪೊಲೀಸರ ಕೆಲಸ ಸ್ವಲ್ಪ ಮಟ್ಟಿಗೆ ಸುಲಭವಾಗಿದೆ. ಅಲ್ಲದೆ,  ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇರುವ ಭಯ ನಿವಾರಣೆಯಾಗುತ್ತಿದೆ. ಇದರಿಂದ ಪೊಲೀಸ್ ಇಲಾಖೆ ಜನರಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಜನರೂ ಕೂಡ ಮುಕ್ತವಾಗಿ ನಮ್ಮೊಂದಿಗೆ ಬೆರೆಯುತ್ತಿದ್ದಾರೆ ಎಂದು ಅವರು ಹೇಳಿದರು.

2015ರಲ್ಲಿ ಈ ಸುಧಾರಿತ ಬೀಟ್ ವ್ಯವಸ್ಥೆಯ ರೂಪು ರೇಷೆ ಸಿದ್ಧಪಡಿಸಲಾಯಿತು. ಬಳಿಕ 2016ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭವಾದ ಈ ವ್ಯವಸ್ಥೆ, 2017ರಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳೂ ವಿಸ್ತರಣೆಯಾಯಿತು. ಈ ವ್ಯವಸ್ಥೆ ಮಾದರಿಯಾಗಿದ್ದು, ಅಕ್ಕಪ್ಪಕದ ರಾಜ್ಯಗಳೂ ಈ ರೀತಿಯ ವ್ಯವಸ್ಥೆ ಜಾರಿಗೊಳಿಸಲು ಚಿಂತನೆ ನಡೆಸಿವೆ.

ಇದು ಕರ್ನಾಟಕಕ್ಕೆ ಹೆಮ್ಮೆಯ ಹೆಮ್ಮೆಯಾಗಿದೆ ಎಂದು ಅವರು ತಿಳಿಸಿದರು. ಸಿಪಿಐ ಸಂದೀಪ ಮುರಗೋಡ, ಪಿಎಸ್ಐಗಳಾದ ರವಿ ಯಡವನ್ನವರ, ಬಾಳಪ್ಪ ತಳವಾರ, ಮುಖಂಡರಾದ ಉದಯ ಹುಕ್ಕೇರಿ, ಗುರು ಕುಲಕರ್ಣಿ, ಅಶೋಕ ಅಂಕಲಗಿ, ಡಾ.ಎಸ್.ಕೆ. ಮಕಾನದಾರ,ಮೊಮೀನ್ ದಾದಾ, ಪ್ರಕಾಶ ದೇಶಪಾಂಡೆ, ಬಸವರಾಜ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT