ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರಗುಂದ: ಜಾಗೃತಿ ಸಮಾವೇಶ 16ರಂದು

ಸರ್ಕಾರಕ್ಕೆ ಹೋರಾಟದ ಕೊನೆಯ ಸಂದೇಶ ರವಾನೆ: ವೀರೇಶ ಸೊಬರದಮಠ
Last Updated 10 ಜುಲೈ 2017, 11:37 IST
ಅಕ್ಷರ ಗಾತ್ರ

ಬಾಗಲಕೋಟೆ: ನರಗುಂದದಲ್ಲಿ ನಡೆಯುತ್ತಿರುವ ಮಹಾದಾಯಿ–ಕಳಸಾ ಬಂಡೂರಿ ಹೋರಾಟ ಇದೇ 16ಕ್ಕೆ ಎರಡು ವರ್ಷ ಪೂರ್ಣಗೊಳ್ಳಲ್ಲಿದೆ. ಅಂದು ಹೋರಾಟದ ಯಶಸ್ವಿಗಾಗಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೋರಾಟದ ಕೊನೆಯ ಸಂದೇಶ ರವಾನಿಸಲಿದ್ದೇವೆ ಎಂದು ರೈತ ಸೇನಾ ಕರ್ನಾಟಕ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ವಿರೇಶ ಸೊಬರದಮಠ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ನಾನಾ ಭಾಗದಿಂದ ಲಕ್ಷಾಂತರ ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳಸಾ–ಬಂಡೂರಿ ಯೋಜನೆಗೆ 2002ರಲ್ಲಿ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ತಾತ್ಕಾಲಿಕವಾಗಿ ಒಪ್ಪಿಗೆ ನೀಡಿದ್ದರು.

ನಂತರದ ದಿನಗಳಲ್ಲಿ ಆಡಳಿತ ನಡೆಸಿದ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳು ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದಾರೆ. ಜವಾಬ್ದಾರಿ ಮರೆತಿರುವ ಅವರಿಗೆ ಸಮಾವೇಶದಲ್ಲಿ ಸೂಕ್ತ ಉತ್ತರ ನೀಡಲಿದ್ದೇವೆ ಎಂದರು.

ಯೋಜನೆ ಜಾರಿಗೆ ಬಿ.ಎಂ.ಹೊರಕೇರಿ ನೇತೃತ್ವದಲ್ಲಿ 1976 ರಿಂದ ಹೋರಾಟ ನಡೆಸಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಲಾಗುತ್ತಿದ್ದರೂ ಸೂಕ್ತ ಸ್ಪಂದನೆ ಮಾತ್ರ ದೊರೆತಿಲ್ಲ. ಹಾಗಾಗಿ ನರಗುಂದ ಹೋರಾಟ ಎಂಥದ್ದು ಎನ್ನುವುದನ್ನು ತೋರಿಸಲಿದ್ದೇವೆ ಎಂದರು.

ಪ್ರಧಾನಿ ನರೇಂದ್ರ ಮೋಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮನಸ್ಸು ಮಾಡಿದರೆ, ಮೂರು ರಾಜ್ಯಗಳ ನಡುವೆ ತಲೆದೋರಿರುವ ಸಮಸ್ಯೆ ಬಗೆಹರಿಸಲು ಸಾಧ್ಯವಿದೆ. ಈ ಬಗ್ಗೆ ನಮ್ಮ ಸಂಸದರು ಸರಿಯಾದ ಪ್ರಯತ್ನ ಮಾಡುತ್ತಿಲ್ಲ. ಯೋಜನೆ ಜಾರಿ ವಿಷಯದಲ್ಲಿ ಗೊಂದಲ ಮೂಡಿಸುವ ಪ್ರಯತ್ನ ನಡೆದಿರುವುದು ಕೂಡಾ ವಿಷಾದನೀಯ ಸಂಗತಿ ಎಂದು ಹೇಳಿದರು.

ಸಮಾವೇಶದಲ್ಲಿ ಮುಂದಿನ ಹೋರಾಟದ ರೂಪುರೇಷೆಯ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲದೇ ಸರ್ಕಾರ ಹಾಗೂ ಎಲ್ಲಾ ರಾಜಕೀಯ ಪಕ್ಷಗಳಿಗೆ ಕೊನೆ ಸಂದೇಶ ರವಾನಿಸಲಿದ್ದೇವೆ. ಲಕ್ಷಾಂತರ ರೈತರು ಹಾಗೂ ಹೋರಾಟಗಾರರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ರೈತರು ಕೂಡಾ ಭಾಗವಹಿಸುವ ಮೂಲಕ ಸಮಾವೇಶ ಯಶಸ್ವಿಗೊಳಿಸು ವಂತೆ ಮನವಿ ಮಾಡಿದರು.

ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶಂಕ್ರಪ್ಪ ಅಂಬಲಿ, ಕುತುಬುದ್ದೀನ್ ಖಾಜಿ, ಶೇಬಣ್ಣ ಪಡಿಯಪ್ಪನವರ, ಮಧುಸೂದನ ತಿವಾರಿ, ಅಶೋಕ ಸಾತನ್ನವರ, ಗುರು ಗಾಣಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT