ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹ ಮಾಡಿದರೆ ಎಫ್‌ಐಆರ್‌

Last Updated 12 ಜುಲೈ 2017, 7:01 IST
ಅಕ್ಷರ ಗಾತ್ರ

ಮಡಿಕೇರಿ: ‘ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಪೋಷಕರ ವಿರುದ್ಧ ಎಫ್ಐಆರ್ ದಾಖಲು ಮಾಡಬೇಕು’ ಎಂದು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಬಾಲ್ಯವಿವಾಹ ಅಕ್ಷಮ್ಯ ಅಪರಾಧ. ಬಾಲ್ಯವಿವಾಹ ಪ್ರಕರಣಗಳು ನಡೆದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಬಾಲ್ಯ ವಿವಾಹ ನಿಷೇಧ ಸೇರಿದಂತೆ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಜೊತೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಇರುವ ಕಾರ್ಯಕ್ರಮಗಳ ಬಗ್ಗೆ ತಾಲ್ಲೂಕುಮಟ್ಟದಲ್ಲಿ ಕಾರ್ಯಾಗಾರ ಆಯೋಜಿಸುವುದು ಅಗತ್ಯ’ ಎಂದು ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚಿಸಿದರು.

‘ಅಂಗನವಾಡಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಸಮರ್ಪಕವಾಗಿ ವಿತರಣೆ ಮಾಡಬೇಕು. ಗರ್ಭೀಣಿಯರು, ಬಾಣಂತಿಯರು, ಕಿಶೋರಿಯರು ಇವರಿಗೆ ಗುಣಮಟ್ಟದ ಪೂರಕ ಪೌಷ್ಟಿಕ ಆಹಾರ ವಿತರಣೆಯ ಪಟ್ಟಿ ತಯಾರಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಾರುಲತಾ ಸೋಮಲ್, ಬಾಕಿಯಿರುವ ಅಂಗನ ವಾಡಿ ಕಟ್ಟಡಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಬೇಕು ಎಂದು ಸೂಚನೆ ನೀಡಿದರು.

ಮಕ್ಕಳಿಗೆ ಹಾಗೂ ತಾಯಂದಿರಿಗೆ ರೋಗ ನಿರೋಧಕ ಚುಚ್ಚು ಮದ್ದು ನೀಡಬೇಕು. 3ರಿಂದ 6 ವರ್ಷದ ಮಕ್ಕಳಿಗೆ ಶಾಲಾ ಪೂರ್ವ ಚಟುವಟಿಕೆಯನ್ನು ನಡೆಸಬೇಕು ಎಂದು ಸೂಚಿಸಿದರು.

ಜಿಲ್ಲಾ ವಿಕಲಚೇತನರ ಇಲಾಖೆ ಅಧಿಕಾರಿ ಜಗದೀಶ್, ಸಿಡಿಪಿಒಗಳಾದ ದಮಯಂತಿ, ಲೀಲಾವತಿ, ಸಂಪತ್‌ಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಪುಟ್ಟಸ್ವಾಮಿ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಆರ್. ಬಸವರಾಜು ಇತರರು ಸಭೆಯಲ್ಲಿ ಹಾಜರಿದ್ದರು.

* * 

ಕಾನೂನಿನ ಭಯವಿಲ್ಲದಿದ್ದರೆ ಬಾಲ್ಯ ವಿವಾಹ ಪ್ರಕರಣಗಳು ನಡೆಯುತ್ತವೆ. ಪ್ರತಿಯೊಬ್ಬರಲ್ಲೂ ಕಾನೂನಿನ ಬಗ್ಗೆ ಅರಿವು ಇರಬೇಕು. ಜೊತೆಗೆ ಭಯವೂ ಸಹ ಇರಲಿ
ರಿಚರ್ಡ್‌ ವಿನ್ಸೆಂಟ್‌ ಡಿಸೋಜ
ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT