ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರ್ಮ್ ಬಸ್ ಗೆ ತಡೆ: ಕಾಂಗ್ರೆಸ್ ಪ್ರತಿಭಟನೆ

Last Updated 12 ಜುಲೈ 2017, 8:48 IST
ಅಕ್ಷರ ಗಾತ್ರ

ಬ್ರಹ್ಮಾವರ : ‘ಗ್ರಾಮಾಂತರ ಪ್ರದೇಶಗಳಲ್ಲಿ ಓಡಾಟ ಆರಂಭಿಸಿರುವ ಸರ್ಕಾರಿ ಬಸ್ ಸಂಚಾರ ಪ್ರಯಾಣಿಕರಿಗೆ ಬಹಳಷ್ಟು ಪ್ರಯೋಜನಕಾರಿಯಾಗಿದೆ. ಆದರೆ ಬಿಜೆಪಿ ಬೆಂಬಲಿತರು ಇದಕ್ಕೆ ತಡೆಯಾಜ್ಞೆ ತರುವ ಮೂಲಕ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ’ ಎಂದು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ ಹೇಳಿದರು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಎಲ್ಲಾ ಘಟಕಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ನರ್ಮ್ ಬಸ್‌ಗಳ ಸಂಚಾರಕ್ಕೆ ತಡೆಯಾಜ್ಞೆ ತಂದಿರುವ ಜನವಿರೋಧಿ ನೀತಿಯನ್ನು ಖಂಡಿಸಿ ಸೋಮವಾರ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ವೆರೋನಿಕಾ ಕರ್ನೇಲಿಯೊ, ಜನಾರ್ದನ ಭಂಡಾರ್ಕಾರ್, ಮೈರ್ಮಾಡಿ ಸುಧಾಕರ ಶೆಟ್ಟಿ, ಮೈರ್ಮಾಡಿ ಅಶೋಕ್ ಕುಮಾರ್ ಶೆಟ್ಟಿ, ದಿನಕರ ಹೇರೂರು, ಗೋಪಿ ಕೆ. ನಾಯ್ಕ,  ರಾಜೇಶ್ ಶೆಟ್ಟಿ ಕುಮ್ರಗೋಡು, ನಿತ್ಯಾನಂದ ಬಿ.ಆರ್, ರಾಘವೇಂದ್ರ ಕುಂದರ್, ರಾಘವೇಂದ್ರ ಶೆಟ್ಟಿ ಕರ್ಜೆ, ಪ್ರಶಾಂತ್, ನವೀನ್ಚಂದ್ರ ನಾಯಕ್, ಅಲ್ತಾಫ್ ಅಹಮದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT