ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಾಲ್ಯದಲ್ಲೇ ಶಿಸ್ತುಬದ್ಧ ಅಧ್ಯಯನದಿಂದ ಯಶಸ್ಸು’

ಕೆಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
Last Updated 13 ಜುಲೈ 2017, 5:41 IST
ಅಕ್ಷರ ಗಾತ್ರ

ಚಿತ್ರದುರ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮೀಸಲಾತಿ ಸಮುದಾಯಗಳ ಅಭ್ಯರ್ಥಿಗಳು ಚಿಕ್ಕವಯಸ್ಸಿನಲ್ಲೇ ಸಫಲರಾದರೆ ಭವಿಷ್ಯದಲ್ಲಿ ಉತ್ತಮ ಹುದ್ದೆ ಪಡೆಯಲು ಅವಕಾಶ ಸಿಗಲಿದೆ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಗುರುಭವನದಲ್ಲಿ ಈಚೆಗೆ ಹಿರೇಗುಂಟನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರ ವ್ಯಾಪ್ತಿಯ ಕೆಪಿಎಸ್‌ಸಿ ಪರೀಕ್ಷಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪುಸ್ತಕ ವಿತರಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕೆಪಿಎಸ್‌ಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಪ್ರತಿಭಾ ಉಚಿತವಾಗಿ ಪುಸ್ತಕಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡವರು ಸಾಕಷ್ಟು ಶ್ರಮವಹಿಸಿ ಓದಬೇಕು. ಪ್ರಸ್ತುತ ಸಾಕಷ್ಟು ಪುಸ್ತಕಗಳು ಲಭ್ಯವಿವೆ. ಅವುಗಳ ಪ್ರಯೋಜನ ಪಡೆದುಕೊಂಡಲ್ಲಿ ಸಮರ್ಥವಾಗಿ ಪರೀಕ್ಷೆ ಎದುರಿಸಬಹುದು ಎಂದು  ಜಿಲ್ಲಾ ಪಂಚಾಯ್ತಿ ಸಿಇಒ ನಿತೇಶ್ ಪಾಟೀಲ್ ಸಲಹೆ ನೀಡಿದರು.

ಎಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಪ್ರತಿಭಾ, ನವೀನ್, ಡಿಡಿಪಿಐ ರೇವಣಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ರವಿಶಂಕರ ರೆಡ್ಡಿ, ಮಿನರಲ್ ಎಂಟರ್‌ಪ್ರೈಸಸ್‌ನ ಮಂಜುನಾಥ, ರೀಝನ್ ವಿಂಡ್‌ಮಿಲ್‌ನ ವೆಂಕಟರೆಡ್ಡಿ ಇದ್ದರು. ಕಾರ್ಯಕ್ರಮದಲ್ಲಿ 100 ಅಭ್ಯರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT