ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ರಂದು ರೈತ ಹುತಾತ್ಮ ದಿನಾಚರಣೆ

Last Updated 13 ಜುಲೈ 2017, 11:14 IST
ಅಕ್ಷರ ಗಾತ್ರ

ಕೋಲಾರ: ‘ನಗರದ ಗಾಂಧಿವನದಲ್ಲಿ ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ರೈತ ಹುತಾತ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ ತಿಳಿಸಿದರು.

‘ರೈತ ನಾಯಕ ಪ್ರೊ.ನಂಜುಂಡಸ್ವಾಮಿ ನೇತೃತ್ವದಲ್ಲಿ ನರಗುಂದದಲ್ಲಿ 1980ರಲ್ಲಿ ಹೋರಾಟ ನಡೆದಾಗ ಸರ್ಕಾರ ಪೊಲೀಸ್‌ ಬಲ ಬಳಸಿ ಹೋರಾಟಗಾರರ ಮೇಲೆ ಗೋಲಿಬಾರ್‌ ಮತ್ತು ಲಾಠಿ ಪ್ರಹಾರ ಮಾಡಿಸಿತ್ತು.  ಅವರ ಸ್ಮರಣಾರ್ಥ ರೈತ ಹುತಾತ್ಮ ದಿನ ಆಚರಿಸಲಾಗುತ್ತಿದೆ’ ಎಂದು ಎಂದರು.

‘ಇತ್ತೀಚಿನ ದಿನಗಳಲ್ಲಿ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ತಪ್ಪಾಗಿದೆ. ಹೋರಾಟಕ್ಕೆ ಮುಂದಾದರೆ ಸರ್ಕಾರ ಅವರ ಮೇಲೆ ದೌರ್ಜನ್ಯ ನಡೆಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತದೆ. ದೇಶದಲ್ಲಿ ಕೃಷಿ ಕ್ಷೇತ್ರ ಬಿಕ್ಕಟ್ಟಿನಲ್ಲಿದ್ದು, ರೈತರ ಸಮಸ್ಯೆಗಳಿಗೆ ಸರ್ಕಾರಗಳ ದುರಾಡಳಿತವೇ ಮೂಲ ಕಾರಣ’ ಎಂದು ದೂರಿದರು.

‘ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ, ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ರೈತ ಹುತಾತ್ಮ ದಿನಾಚರಣೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT