ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೊಬೆಲ್‌ ಪ್ರಶಸ್ತಿ ಪುರಸ್ಕೃತ ಲಿಯು ಕ್ಸಿಯಾಒಬೊ ನಿಧನ

Last Updated 13 ಜುಲೈ 2017, 19:30 IST
ಅಕ್ಷರ ಗಾತ್ರ

ಶೆನ್ಯಾಂಗ್‌(ಚೀನಾ): ಪೊಲೀಸ್‌ ವಶದಲ್ಲಿದ್ದ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಲಿಯು ಕ್ಸಿಯಾಒಬೊ (61) ಗುರುವಾರ ನಿಧನರಾದರು.

ಕ್ಯಾನ್ಸರ್‌ಗೆ ತುತ್ತಾಗಿದ್ದ ಲಿಯು ಅವರನ್ನು ಬಿಡುಗಡೆಗೊಳಿಸಿ ವಿದೇಶದಲ್ಲಿ ವಾಸಿಸಲು ಅವಕಾಶ ಕಲ್ಪಿಸಬೇಕು ಎಂದು ಅಮೆರಿಕ, ಜರ್ಮನಿ ಸೇರಿದಂತೆ ಹಲವು ದೇಶಗಳು ಮಾಡಿದ್ದ ಮನವಿಯನ್ನು ಚೀನಾ ತಿರಸ್ಕರಿಸಿತ್ತು.

ಜೈಲಿನಲ್ಲಿದ್ದ ಲಿಯು ಅವರನ್ನು ಬಿಗಿ ಭದ್ರತೆಯೊಂದಿಗೆ ಇತ್ತೀಚೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಪ್ರಜಾಪ್ರಭುತ್ವದ ಪ್ರತಿಪಾದಕರಾಗಿದ್ದ  ಲಿಯು ಅವರು  ಸರ್ಕಾರದ ಧೋರಣೆಗಳನ್ನು ಕಟುವಾಗಿ ಟೀಕಿಸುತ್ತಿದ್ದರು. ಹೀಗಾಗಿ ಅವರನ್ನು 2008ರಲ್ಲಿ ಬಂಧಿಸಲಾಗಿತ್ತು.

ಮಾನವ ಹಕ್ಕುಗಳ ರಕ್ಷಣೆಗಾಗಿ ಮತ್ತು ಚೀನಾದಲ್ಲಿನ ರಾಜಕೀಯ ವ್ಯವಸ್ಥೆ ಸುಧಾರಣೆಗಾಗಿ ಅವರು ಒತ್ತಾಯಿಸಿದ್ದರು.  2009ರ ಡಿಸೆಂಬರ್‌ನಲ್ಲಿ ಲಿಯು ಅವರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.

2010ರಲ್ಲಿ ಒಸ್ಲೊದಲ್ಲಿ ನಡೆದ ನೊಬೆಲ್‌ ಶಾಂತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಲಿಯು ಅವರು ಕುಳಿತುಕೊಳ್ಳಬೇಕಾಗಿದ್ದ ಕುರ್ಚಿಯನ್ನು ಉದ್ದೇಶಪೂರ್ವಕವಾಗಿ ಖಾಲಿ ಇಡಲಾಗಿತ್ತು.

ಲಿಯು ಪತ್ನಿ ಲಿಯು ಕ್ಸಿಯಾ ಅವರನ್ನು ಸಹ 2010ರಿಂದ ಗೃಹ ಬಂಧನದಲ್ಲಿರಿಸಲಾಗಿದೆ. ಅವರನ್ನು ಬಿಡುಗಡೆ ಮಾಡುವಂತೆ ಮಾನವ ಹಕ್ಕುಗಳ ಸಂಘಟನೆಗಳು ಒತ್ತಾಯಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT