ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಬಸ್‌ಪಾಸ್‌ಗೆ ಆಗ್ರಹ

Last Updated 14 ಜುಲೈ 2017, 7:33 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ಸಮುದಾಯದ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿ ಗುರುವಾರ ನಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬಿ.ಬಿ.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ನಗರದ ಅಂಬೇಡ್ಕರ್ ವೃತ್ತದ ವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದರು.

ಎಬಿವಿಪಿ ವಿಭಾಗ ಸಂಚಾಲಕ ಮಂಜುನಾಥ್‌ ರೆಡ್ಡಿ ಮಾತನಾಡಿ, ‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ನೀಡುತ್ತಿರುವುದು ಸ್ವಾಗತಾರ್ಹ. ಆದರೆ ವಿದ್ಯಾರ್ಥಿಗಳ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡುವುದು ಖಂಡನೀಯ’ ಎಂದರು.

‘ರಾಜ್ಯದಲ್ಲಿ ಸತತ ಬರಗಾಲದಿಂದ ಗ್ರಾಮೀಣ ಭಾಗದ ರೈತ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿವೆ. ಬಸ್‌ಪಾಸ್‌ಗಳನ್ನು ಪಡೆಯುವವರ ಪೈಕಿ ಹಳ್ಳಿಯಿಂದ ಬರುವ ವಿದ್ಯಾರ್ಥಿಗಳೇ ಅಧಿಕವಾಗಿರುತ್ತಾರೆ. ಆದ್ದರಿಂದ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೂಡ ಉಚಿತವಾಗಿ ಪಾಸ್‌ ವಿತರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.

ಎಬಿವಿಪಿ ಜಿಲ್ಲಾ ಘಟಕದ ಸಹ ಸಂಚಾಲಕ ಚರಣ್ ರೆಡ್ಡಿ ಮಾತನಾಡಿ, ‘ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಕೆಲ ಸಮುದಾಯಗಳನ್ನು ಓಲೈಸಲು ರಾಜಕಾರಣಿಗಳು ವಿದ್ಯಾರ್ಥಿ ಗಳ ನಡುವೆಯೇ ತಾರತಮ್ಯ ಮಾಡುವ ಮಟ್ಟಕ್ಕೆ ತಲುಪಿದ್ದಾರೆ. ಇಂತಹ ಭೇದ ಭಾವ ಮಾಡುವ ಯೋಜನೆ ಯಿಂದ ವಿದ್ಯಾರ್ಥಿಗಳಲ್ಲಿ ಜಾತಿ ವ್ಯವಸ್ಥೆಯ ಅನಿಷ್ಠವನ್ನು ಬೆಳೆಸಿದಂ ತಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಶಿಕ್ಷಣ ಮಾರಾಟದ ವಸ್ತುವಾಗಿ, ಪ್ರವೇಶ ಶುಲ್ಕದ ಹೆಸರಿನಲ್ಲಿ ಖಾಸಗಿ ಕಾಲೇಜುಗಳು ಬಡ ಕುಟುಂಬಗಳನ್ನು ಸುಲಿಗೆ ಮಾಡುತ್ತಿವೆ. ಇಂತಹ ಸಂದರ್ಭ ದಲ್ಲಿ ಸರ್ಕಾರ ಕೂಡ ವಿದ್ಯಾರ್ಥಿಗಳ ನಡುವೆ ತಾರತಮ್ಯ ಧೋರಣೆ ತೋರುವುದು ತರವಲ್ಲ. ಸರ್ಕಾರ ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ಉಚಿತವಾಗಿ ಒದಗಿಸಬೇಕು.

ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ  ಹೋರಾಟ ನಡೆಸಲಾಗು ತ್ತದೆ’ ಎಂದು ತಿಳಿಸಿದರು.

‘ಕಾಲೇಜು ಶಿಕ್ಷಣ ಇಲಾಖೆಯು ಪದವಿ ಕಾಲೇಜುಗಳ ಸಮಯವನ್ನು ಬೆಳಿಗ್ಗೆ 8ಕ್ಕೆ ಬದಲಾಯಿಸಿರುವುದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟು ಮಾಡು ತ್ತಿದೆ. ಆದ್ದರಿಂದ ಕೂಡಲೇ ಇಲಾಖೆ  ಆ ಆದೇಶವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. ಪ್ರತಿಭಟನಾ ಕಾರರು ತಹಶೀಲ್ದಾರ್ ಮತ್ತು ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ವಿಜಯ್, ಬಾಬುರೆಡ್ಡಿ, ಜಾನಕಿ, ಸುರೇಶ್ ರೆಡ್ಡಿ, ಸ್ನೇಹಾ,ಫಿರ್ದೋಸ್, ಮುನಿರಾಜು, ರವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT