ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರಿಗಳ ಮೇಲಿನ ದಾಳಿ ತಡೆ: ಕೇಂದ್ರ ಸರ್ಕಾರ ವಿಫಲ

Last Updated 14 ಜುಲೈ 2017, 9:53 IST
ಅಕ್ಷರ ಗಾತ್ರ

ಗೋಕಾಕ: ‘ಅಮರನಾಥ ಯಾತ್ರಿಗಳ ಮೇಲೆ ನಡೆದ ದಾಳಿಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಎಐಸಿಸಿ ಕಾರ್ಯದರ್ಶಿ ಮಾಣಿಕಂ ಠಾಕೂರ್ ಹೇಳಿದರು. ಇಲ್ಲಿನ ಸಮುದಾಯ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ನಗರ ಹಾಗೂ ಗ್ರಾಮೀಣ ಘಟಕದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಮಾದರಿ ಸರ್ಕಾರವಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಮಾಣಿಕಂ ಠಾಕೂರ್‌ ಹಾಗೂ ವಿನಯ ನಾವಲಗಟ್ಟಿ ಅವರನ್ನು ಕಾಂಗ್ರೆಸ್ ಕಮೀಟಿಯಿಂದ ಸನ್ಮಾನಿಸಲಾಯಿತು. ಕಾಂಗ್ರೆಸ್ ಪಕ್ಷದ ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ತುಕಾರಾಮ ಕಾಗಲ್, ಮಡ್ಡೆಪ್ಪ ತೋಳಿನವರ, ಡಿಸಿಸಿ ಬ್ಯಾಂಕ ನಿರ್ದೇಶಕ ಶಿವಾನಂದ ಡೋಣಿ, ಎಪಿಎಂಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ನಗರ ಬ್ಲಾಕ್ ಅಧ್ಯಕ್ಷ ನಜೀರಅಹಮ್ಮದ ಶೇಖ, ಮುಖಂಡರಾದ ವಿವೇಕ ಜತ್ತಿ, ಪಿ.ಆರ್.ನಾಯ್ಡು, ಮೋಹನ ರೆಡ್ಡಿ, ಸನದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT