ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಕ್ಕು ಪತ್ರ ವಿತರಣೆ ಶೀಘ್ರ: ಭರವಸೆ

Last Updated 14 ಜುಲೈ 2017, 10:03 IST
ಅಕ್ಷರ ಗಾತ್ರ

ಶಿರಹಟ್ಟಿ: ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ ಅರಣ್ಯ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರು ತಕ್ಷಣ ಅಗತ್ಯ ದಾಖಲಾತಿಗಳನ್ನು ಸಂಬಂಧಿಸಿದ ಇಲಾಖೆ ಗಳಿಗೆ ಹಾಜರು ಪಡಿಸಬೇಕು ಎಂದು ಮಾಜಿ ಸಚಿವ ಡಿ.ಆರ್‌.ಪಾಟೀಲ ತಿಳಿಸಿದರು. ಗುರುವಾರ ಸ್ಥಳೀಯ ಫಕೀರೇಶ್ವರ ಸಭಾಭವನದಲ್ಲಿ ಅರಣ್ಯ ಹಕ್ಕು ಸಮಿತಿ ಪ್ರಕಾರ್ಯಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಸಂಕ್ರಮಣದೊಳಗೆ ಸಾಗುವಳಿ ದಾರರ ಹಕ್ಕುಪತ್ರಗಳನ್ನು ವಿತರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋ ನ್ಮುಖವಾಗಿದೆ. ಗ್ರಾಮಸಭೆ ನಡೆಸಿ ಅರ್ಹ ದಾಖಲಾತಿಗಳನ್ನು ಒದಗಿಸಿ ಅಧಿಕಾರಿಗಳಿಗೆ ಸಹಕರಿಸಬೇಕು ಎಂದರು. ಜಮೀನು ಸಾಗುವಳಿ ಮಾಡಲು ಮಾತ್ರ ಸರ್ಕಾರ ಹಕ್ಕುಪತ್ರ ನೀಡಲಿದ್ದು, ಮಾರಾಟ ಮಾಡಲು ಬರುವದಿಲ್ಲ. ಜತೆಗೆ ಸಸಿಗಳನ್ನು ನೆಟ್ಟು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ಹೇಳಿದರು.

10 ರಿಂದ 15 ಜನ ಸದಸ್ಯರಿರುವ ಸಮಿತಿ ರಚನೆ ಮಾಡಿ ಗ್ರಾಮ ಸಭೆಯಲ್ಲಿ ಆಯ್ಕೆ ಆದಷ್ಟು ಬೇಗನೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದರು. ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬುಟ್ಟಕಟ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗಗಳ ಅಭಿವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸಹ ರೈತರನ್ನು ಒಕ್ಕಲೆಬ್ಬಿಸದಂತೆ ಈ ಕುರಿತು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ರೈತರು ನಿರ್ಲಕ್ಷ್ಯವಹಿಸದೇ ದಾಖಲೆಗಳನ್ನು ನೀಡಿ ಸಹಕರಿಸಬೇಕು ಎಂದು ಕಿವಿಮಾತು ಹೇಳಿದರು.

ಉಪವಿಭಾಗಾಧಿಕಾರಿ ಮಂಜುನಾಥ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್‌.ಪಿ. ಬಳಿಗಾರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಬುಡನಶಾ ಮಕಾನದಾರ್, ತಹಶೀ ಲ್ದಾರ್‌ ಎ.ಎಂ. ಅಮರಾವಡಗಿ, ಈರಣ್ಣ ಕೆಲೂರ, ತಾಲ್ಲೂಕು ಪಂಚಾಯಿತಿ ಸದಸ್ಯ ದೇವಪ್ಪ ಲಮಾಣಿ, ಈರಣ್ಣ ಅಂಗಡಿ, ಎಂ.ಕೆ. ಲಮಾಣಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್‌.ಬಿ.ಹರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT