ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಲ್‌ ಇಎಂಸಿ: 14ನೇ ಪೀಳಿಗೆ ಸರ್ವರ್‌ ಬಿಡುಗಡೆ

Last Updated 14 ಜುಲೈ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲ ಕ್ಷೇತ್ರದ ಗ್ರಾಹಕರಿಗೆ ಅನುಕೂಲವಾಗುವಂತಹ ಮುಂದಿನ ಪೀಳಿಗೆಯ ಸುಧಾರಿತ ಸರ್ವರ್‌ರನ್ನು ಡೆಲ್‌ ಇಎಂಸಿ ಬಿಡುಗಡೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ನೆರವಾಗಬಲ್ಲ ಸರ್ವರ್‌ ಇದಾಗಿದ್ದು, ಗ್ರಾಹಕರ ಕೆಲಸಗಳನ್ನು ಸುಲಭವಾಗಿಸಲಿದೆ ಎಂದು ಸಂಸ್ಥೆ ತಿಳಿಸಿದೆ.

‘ಹೊಸ ಪೀಳಿಗೆಯ ಸರ್ವರ್‌, ದತ್ತಾಂಶ ಕೇಂದ್ರಗಳಿಗೆ ಹೆಚ್ಚು ಉಪಯೋಗವಾಗಲಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರ ಇನ್ನಷ್ಟು ಸುಧಾರಣೆ ಕಾಣಲಿದೆ’ ಎಂದು ಸಂಸ್ಥೆಯ ಅಧ್ಯಕ್ಷ ರಾಜೇಶ್‌ ಜಾನೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಇದನ್ನು ಸುಲಭವಾಗಿ ಅಳವಡಿಸಿಕೊಳ್ಳಬಹುದು. ಗ್ರಾಹಕರ ಅನುಕೂಲಕ್ಕಾಗಿ ಸ್ವಯಂಚಾಲಿತ ವ್ಯವಸ್ಥೆ ಮತ್ತು ಹೆಚ್ಚು ಸುರಕ್ಷಾ ಕ್ರಮಗಳನ್ನು ಅಳವಡಿಸಲಾಗಿದೆ’ ಎಂದರು.

‘ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸಲು ಮತ್ತು  ದತ್ತಾಂಶ ಕೇಂದ್ರಗಳು ಉತ್ತಮ ಸೇವೆ ಒದಗಿಸುವುದಕ್ಕಾಗಿ ಸುಧಾರಿತ ತಂತ್ರಜ್ಞಾನ ಅನಿವಾರ್ಯ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು 14ನೇ ಪೀಳಿಗೆಯ ಸರ್ವರ್‌ ಅನ್ನು ಅಭಿವೃದ್ಧಿಪಡಿಸಲಾಗಿದೆ’ ಎಂದು ಸಂಸ್ಥೆಯ ಹಿರಿಯ ನಿರ್ದೇಶಕ ಮನೀಷ್‌ ಗುಪ್ತ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT