ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ, ಚಿಕೂನ್‌ಗುನ್ಯಾ ಭೀತಿ, ಪರಿಶೀಲನೆ

Last Updated 15 ಜುಲೈ 2017, 6:30 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ವ್ಯಾಪ್ತಿಯಲ್ಲಿ ಜ್ವರದ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಭೇಟಿ ನೀಡಿದ್ದು,  ಪರಿಸ್ಥಿತಿ ಹಾಗೂ ಸೌಲಭ್ಯವನ್ನು ಪರಿಶೀಲಿಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳಿಗೂ ಭೇಟಿ ನೀಡಿದ್ದ ಅವರು, ರೋಗಿಗ ಳಿಂದಲೂ ಮಾಹಿತಿ ಪಡೆದರು. ವೈದ್ಯರ ಜೊತೆಗೆ ಪರಿಸ್ಥಿತಿ ಕುರಿತು ಚರ್ಚಿಸಿದರು.

‘ತಾಲ್ಲೂಕಿನಲ್ಲಿ ಡೆಂಗಿ ಜ್ವರದ ಸಮಸ್ಯೆ ಹೆಚ್ಚಿದೆ. ಎಲ್ಲವೂ ಡೆಂಗಿ ಅಲ್ಲ. ಜನರು ಆತಂಕಕ್ಕೆ ಒಳಗಾಗುವುದು ಬೇಡ’ ಎಂದು ಸಲಹೆ ಮಾಡಿದರು. ಆಸ್ಪತ್ರೆಯಲ್ಲಿ ಇರುವ ರಕ್ತ ಪರೀಕ್ಷೆ ಯಂತ್ರ ಸದ್ಯ ಕೆಟ್ಟಿದೆ. ಎರಡು ದಿನದಲ್ಲಿ ಇದನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಪುರುಷರ ವಾರ್ಡ್‌ನಲ್ಲಿ ಫ್ಯಾನ್‌,ದೀಪದ ಸಮಸ್ಯೆ ಇದೆ ಎಂಬ ದೂರಿದೆ. ಕೂಡಲೇ ಸರಿಪಡಿಸಬೇಕು ಎಂದು ಆಡಳಿತಾಧಿಕಾರಿ ಮಹದೇವ ನಾಯಕ್‌ಗೆ ಸೂಚಿಸಿದರು.
ಆಡಳಿತ ವೈದ್ಯಾಧಿಕಾರಿ ಡಾ. ವೀರಭದ್ರಪ್ಪ, ತಾಲ್ಲೂಕಿನ ಎಲ್ಲ ಪ್ರಾಥ ಮಿಕ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.

ಪುರಸಭೆ ಅಧ್ಯಕ್ಷ ರಿಯಾಜಿನ್, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಅವರಿಗೂ ಸ್ವಚ್ಛತೆ ಕುರಿತು ಗಮನ ಹರಿಸಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಹನುಮಂತು, ಚಂದ್ರಕುಮಾರ, ಎಪಿಎಂಸಿ ಅಧ್ಯಕ್ಷ ಅಂಬರೀಶ್, ತಾಪಂ ಉಪಾಧ್ಯಕ್ಷ ಮಾಧು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT